ತಿರುವನಂತಪುರ: ಕೇರಳದಲ್ಲಿ ಕಲಾ ನಿರ್ದೇಶಕರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನೈತಿಕ ಪೊಲೀಸ್‌ಗಿರಿಯೇ ಇವರ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.
ಸುರೇಶ್ ಚಾಲಿಯತ್ತ್ (44)ಅವರ ಮೃತದೇಹ ಮಲಪ್ಪುರಂ ಜಿಲ್ಲೆಯ ವೇಂಗರ ಸಮೀಪದ ಆಶಾರಿಪ್ಪಡಿಯಲ್ಲಿರುವ ಅವರ ಸ್ವಗೃಹದಲ್ಲಿ ಪತ್ತೆಯಾಗಿದೆ.
‘ಮಹಿಳೆಯೊಬ್ಬರೊಂದಿಗೆ ಮಾತನಾಡಿದ ಕಾರಣಕ್ಕೆ ಕೆಲ ದಿನಗಳ ಹಿಂದೆ ಗುಂಪೊಂದು ಕುಟುಂಬದವರ ಎದುರಿಗೆ ಸುರೇಶ್ ಅವರ ಮೇಲೆ ಹಲ್ಲೆ ನಡೆಸಿತ್ತು. ಈ ಘಟನೆ ನಡೆದ ಬಳಿಕ ಅವರು ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು’ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಚಲನಚಿತ್ರಗಳಿಗೆ ಕಲಾ ನಿರ್ದೇಶನ ಮಾಡುತ್ತಿದ್ದ ಸುರೇಶ್ ಅವರು ಶಾಲಾ ಶಿಕ್ಷಕರೂ ಆಗಿದ್ದರು. ಅವರು ಜಿಲ್ಲೆಯ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿದ್ದರು.
‘ಸುರೇಶ್ ಅವರ ಮೇಲೆ ಈ ಹಿಂದೆ ನಡೆದ ದಾಳಿ ಸಂಬಂಧ, ಯಾವುದೇ ದೂರು ದಾಖಲಾಗಿಲ್ಲ. ಅಸಹಜ ಸಾವು ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ’ ಎಂದು ವೇಂಗರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.