ADVERTISEMENT

ಅತ್ಯಂತ ಕಳಪೆ ಮಟ್ಟಕ್ಕೆ ಇಳಿದ ದೆಹಲಿ ವಾಯು ಗುಣಮಟ್ಟ: ವರದಿ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 6:55 IST
Last Updated 23 ಅಕ್ಟೋಬರ್ 2024, 6:55 IST
<div class="paragraphs"><p>ದೆಹಲಿ ಅತ್ಯಂತ ಕಳಪೆ ವಾಯು ಗುಣಮಟ್ಟ(ಸಂಗ್ರಹ ಚಿತ್ರ)</p></div>

ದೆಹಲಿ ಅತ್ಯಂತ ಕಳಪೆ ವಾಯು ಗುಣಮಟ್ಟ(ಸಂಗ್ರಹ ಚಿತ್ರ)

   

ಪಿಟಿಐ

ನವದೆಹಲಿ: ದೆಹಲಿಯಲ್ಲಿ ಅತ್ಯಂತ ಕಳಪೆ ವಾಯು ಗುಣಮಟ್ಟ ಹೊಂದಿದ್ದು, ವಾಯು ಗುಣಮಟ್ಟದ ಸೂಚ್ಯಂಕವು (ಎಐಕ್ಯೂ) 363 ತಲುಪಿದೆ ಎಂದು ವರದಿಯಾಗಿದೆ.

ADVERTISEMENT

ದೆಹಲಿಯ ಅನೇಕ ಸ್ಥಳಗಳಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಜಹಾಂಗೀರ್ಪುರಿ, ವಿವೇಕ್ ವಿಹಾರ್, ಆನಂದ್ ವಿಹಾರ್ ಪ್ರದೇಶಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 400 ಗಡಿ ದಾಟಿದೆ ಎನ್ನಲಾಗಿದೆ.

ವಾಯು ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಟಾಕಿ ತಯಾರಿಕೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ ಜನವರಿಯವರೆಗೂ ನಿಷೇಧಿಸಲಾಗಿದೆ ಎಂದು ಪರಿಸರ ಸಚಿವ ಗೋಪಾಲ್‌ ರಾಯ್‌ ಇತ್ತೀಚೆಗೆ ತಿಳಿಸಿದ್ದರು.

ಅತ್ಯಂತ ಕಳಪೆ ವಾಯು ಗುಣಮಟ್ಟ ಸೂಚ್ಯಂಕ ಮುಂದುವರಿದರೆ ಶಾಲೆಗಳಿಗೆ ರಜೆ ನೀಡುವುದರ ಬಗ್ಗೆಯೂ ಕ್ರಮ ಕೈಗೊಳ್ಳುವ ಬಗ್ಗೆ ಚಿಂತನೆ ನಡೆದಿದೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.