ಕೋಲ್ಕತ್ತ:ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ವಶದಲ್ಲಿರುವ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿಅವರ ಬೆಲ್‌ಘಾರಿಯಾ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ರಾತ್ರಿ ₹ 27.9 ಕೋಟಿ ನಗದು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿಯೆಲ್ಲ ಅಧಿಕಾರಿಗಳು ಹಣದ ಎಣಿಕೆ ನಡೆಸಿದ್ದಾರೆ. ಇದರ ಜೊತೆಗೆ, ಕೆ.ಜಿಗಟ್ಟಲೆ ಚಿನ್ನವನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಅದರ ಮೌಲ್ಯ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
ಇದುವರೆಗೆ ಅರ್ಪಿತಾ ಅವರ ಬಳಿ ಸರಿ ಸುಮಾರು ₹ 50 ಕೋಟಿಯಷ್ಟು ಹಣ ವಶಕ್ಕೆ ಪಡೆಯಲಾಗಿದೆ.
ಓದಿ...ಪಾರ್ಥ ಚಟರ್ಜಿ ನನ್ನ ಮನೆಯನ್ನೇ ಮಿನಿಬ್ಯಾಂಕ್ ಮಾಡಿಕೊಂಡಿದ್ದರು: ಅರ್ಪಿತಾ ಮುಖರ್ಜಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.