ಅಯೋಧ್ಯೆ: ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಈವರೆಗೆ 1.5 ಕೋಟಿ ಜನರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ.
ಪ್ರತಿನಿತ್ಯ ಸರಿಸುಮಾರು ಒಂದು ಲಕ್ಷ ಜನ ಬಾಲರಾಮನದ ದರ್ಶನ ಪಡೆಯುತ್ತಿದ್ದಾರೆ ಎಂದು ಚಂಪತ್ ರಾಯ್ ಅವರು ಎಎನ್‌ಐಗೆ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ರಾಮಜನ್ಮಭೂಮಿ ಸುತ್ತ 14 ಅಡಿ ಅಗಲದ ಭದ್ರತಾ ಗೋಡೆಯನ್ನು ನಿರ್ಮಿಸಲಾಗುವುದು. ಇದಕ್ಕೆ ಪರ್ಕೋಟ ಎಂದು ಕರೆಯುತ್ತಾರೆ. ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ವೇಳೆ ದೇವಾಲಯದ ನೆಲಮಹಡಿ ನಿರ್ಮಾಣ ಮಾತ್ರ ಪೂರ್ಣಗೊಂಡಿತ್ತು. ಈಗ ಮೊದಲ ಮಹಡಿಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ರಾಮಮಂದಿರದ ಮುಂದಿನ ಯೋಜನೆಗಳ ಕುರಿತು ವಿವರಿಸಿದರು.
ಅಯೊಧ್ಯೆಯಲ್ಲಿ ಜ.22 ರಂದು 51 ಇಂಚು ಎತ್ತರದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಜರುಗಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನ ಯಜಮಾನರಾಗಿ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮವನ್ನು ನೆರವೇರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.