ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥೀವ ಶರೀರ ಬಿಜೆಪಿ ಪ್ರಧಾನ ಕಚೇರಿ ತಲುಪಿದ್ದು ಇಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಇಲ್ಲಿನ ಪಂಡಿತ್ ದಿನದಯಾಳ್ ಮಾರ್ಗದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಾರ್ಥೀವ ಶರೀರವನ್ನು ಇಡಲಾಗಿದೆ.
ಗಣ್ಯರು ಮತ್ತು ಪಕ್ಷದ ಪ್ರಮುಖರಿಗೆ ಮಾತ್ರ ಹತ್ತಿರದಿಂದ ಪಾರ್ಥಿವ ಶರೀರ ವೀಕ್ಷಿಸುವ ಅವಕಾಶ ಮಾಡಿಕೊಡಲಾಗಿದೆ. ಆದರೆ ಸಾರ್ವಜನಿಕರು ದೂರದಿಂದಲೇ ಪಾರ್ಥೀವ ಶರೀರವನ್ನು ವೀಕ್ಷಣೆ ಮಾಡಬಹುದಾಗಿದೆ.
ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅಂತಿಮ ನಮನ ಸಲ್ಲಿಸಿದರು. ಬಿಜೆಪಿ ಕಚೇರಿಯಲ್ಲಿ ಮಧ್ಯಾಹ್ನ 1 ಗಂಟೆಯವರೆಗೂ ದರ್ಶನಕ್ಕೆ ಇಡಲಾಗುವುದು. ನಂತರ ಅಂತ್ಯಕ್ರಿಯೆಗೆ ಮೆರವಣಿಗೆ ಮೂಲಕ ‘ಸ್ಮೃತಿ ಸ್ಥಲ'ಕ್ಕೆ ತೆಗೆದುಕೊಂಡು ಹೋಗಲಾಗುವುದು.
ಅಂತಿಮ ಯಾತ್ರೆ ಸಾಗುವ ರಸ್ತೆ ಮಾರ್ಗಗಳಲ್ಲಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಈ ಮಾರ್ಗಗಳಲ್ಲಿ ಸಂಚಾರ ಬಂದ್ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.