ಹೈದರಾಬಾದ್: ಭಾರತದಲ್ಲಿ ಇರಬೇಕೆಂದರೆ ‘ಭಾರತ್ ಮಾತಾ ಕಿ ಜೈ’ ಎನ್ನಲೇಬೇಕು ಎಂದು ಕೇಂದ್ರ ಸಚಿವ ಕೈಲಾಶ್ ಚೌದರಿ ಹೇಳಿದ್ದಾರೆ.
ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹೈದರಾಬಾದಿನಲ್ಲಿ ಸಾರ್ವಜನಿಕ ಪ್ರತಿನಿಧಿಗಳೊಬ್ಬರ ಹೇಳಿಕೆ ಬಗ್ಗೆ ಪ್ರಸ್ತಾಪಿಸಿ, ಭಾರತ ಮಾತಾ ಕಿ ಜೈ ಎನ್ನದವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕು. ರಾಜ್ಯದಲ್ಲಿ ರಾಷ್ಟ್ರೀಯ ಚಿಂತನೆಯ ಸರ್ಕಾರ ರಚನೆಯಾಗಬೇಕು ಎಂದರು.
ಭಾರತದಲ್ಲಿ ಇದ್ದುಕೊಂಡು ಯಾರು ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗುವುದಿಲ್ಲವೋ ಅಂಥವರು ಪಾಕಿಸ್ತಾನಕ್ಕೆ ಹೋಗಬಹುದು, ಇಲ್ಲಿರುವ ಅಗತ್ಯವಿಲ್ಲ. ‘ವಂದೇ ಮಾತರಂ’ ಮತ್ತು ‘ಭಾರತ್ ಮಾತಾ ಕಿ ಜೈ’ ಎಂದು ಹೇಳುವವರಿಗೆ ಮಾತ್ರ ದೇಶದಲ್ಲಿ ಸ್ಥಾನವಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.