ADVERTISEMENT

ಮಾಸ್ಕೋದಿಂದ ಗೋವಾಕ್ಕೆ ಬರುತ್ತಿದ್ದ 240 ಜನರಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ!

ಪಿಟಿಐ
Published 21 ಜನವರಿ 2023, 6:10 IST
Last Updated 21 ಜನವರಿ 2023, 6:10 IST
ಪ್ರಾತಿನಿಧಕ ಚಿತ್ರ
ಪ್ರಾತಿನಿಧಕ ಚಿತ್ರ    

ಪಣಜಿ: ರಷ್ಯಾದ ರಾಜಧಾನಿ ಮಾಸ್ಕೋದಿಂದ 240 ಪ್ರಯಾಣಿಕರೊಂದಿಗೆ ಗೋವಾಗೆ ಹೊರಟಿದ್ದ ಚಾರ್ಟರ್ಡ್ ವಿಮಾನವನ್ನು ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆ ಉಜ್ಬೇಕಿಸ್ತಾನಕ್ಕೆ ತಿರುಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಗೋವಾದ ದಾಬೋಲಿಮ್‌ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 4.15ಕ್ಕೆ ವಿಮಾನ ಲ್ಯಾಂಡ್ ಆಗಬೇಕಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಅಜುರ್ ಏರ್’ ನಿರ್ವಹಿಸುತ್ತಿರುವ ವಿಮಾನ (AZV2463) ಭಾರತೀಯ ವಾಯುಪ್ರದೇಶ ಪ್ರವೇಶಿಸುವ ಮುನ್ನವೇ, ಅದನ್ನು ಬೇರೆ ಕಡೆಗೆ ಕಳುಹಿಸಲಾಯಿತು ಎಂದು ಅವರು ಹೇಳಿದರು.

ADVERTISEMENT

‘ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಸಂದೇಶ ರಾತ್ರಿ 12.30ಕ್ಕೆ ದಾಬೋಲಿಮ್‌ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಇಮೇಲ್ ಮೂಲಕ ಬಂದಿರುವುದಾಗಿ ತಿಳಿಯುತ್ತಲೇ ವಿಮಾನವನ್ನು ಬೇರೆಡೆಗೆ ತಿರುಗಿಸಲಾಯಿತು’ ಎಂದು ಅಧಿಕಾರಿ ಹೇಳಿದರು.

ಎರಡು ವಾರಗಳ ಹಿಂದೆ, ಮಾಸ್ಕೋ–ಗೋವಾ ವಿಮಾನವೊಂದಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ವಿಮಾನವನ್ನು ಗುಜರಾತ್‌ನ ಜಾಮ್‌ನಗರದಲ್ಲಿ ತುರ್ತಾಗಿ ಲ್ಯಾಂಡ್‌ ಮಾಡಲಾಗಿತ್ತು.

ಇವುಗಳನ್ನೂ ಓದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.