ನವದೆಹಲಿ: ಈಶಾನ್ಯ ದೆಹಲಿಯ ಮುಸಲ್ಮಾನರಲ್ಲಿ ಬಹುಪತ್ನಿತ್ವ ಪದ್ಧತಿ ಪ್ರಚಲಿತದಲ್ಲಿಲ್ಲ. ಆದರೂ ಸಮುದಾಯದ ಬಹುಪಾಲು ಮಹಿಳೆಯರು ತ್ರಿವಳಿ ತಲಾಖ್ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಬೆಂಬಲಿಸಿದ್ದಾರೆ ಎಂದು ದೆಹಲಿಯ ಅಲ್ಪಸಂಖ್ಯಾತರ ಆಯೋಗದ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಈಶಾನ್ಯ ದೆಹಲಿಯ 30 ಪ್ರದೇಶಗಳಲ್ಲಿ 600ಕ್ಕೂ ಹೆಚ್ಚು ಮುಸ್ಲಿಂ ಮಹಿಳೆಯರಿದ್ದಾರೆ. ಆದರೆ, ಇಲ್ಲಿ ತ್ರಿವಳಿ ತಲಾಖ್ ಮತ್ತು ಬಹುಪತ್ನಿತ್ವ ಪದ್ಧತಿ ಪ್ರಚಲಿತದಲಿಲ್ಲ. ತ್ರಿವಳಿತಲಾಖ್ ನಿಷೇಧಿಸಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು. ಈ ಬಗ್ಗೆ ಅಲ್ಲಿನ ಶೇ 90ರಷ್ಟು ಮಹಿಳೆಯರಿಗೆ ಅರಿವಿದೆ. ಅಲ್ಲದೇ ಸುಪ್ರೀಂಕೋರ್ಟ್ ತೀರ್ಪನ್ನು ಇವರು ಸ್ವಾಗತಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.
ಈ ತೀರ್ಪಿನಿಂದಾಗಿ ಮುಸ್ಲಿಂ ಮಹಿಳೆಯರಿಗೆ ಹೊಸ ಜೀವನ ತೆರೆದಂತಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ, ಕೆಲವೊಂದು ಮಹಿಳೆಯರು ಸುಪ್ರೀಂಕೋರ್ಟ್ ತೀರ್ಪು ಏನೇ ಇರಲಿ. ನಮ್ಮ ಸಮುದಾಯದಲ್ಲಿ ಆಚರಿಸುವ ಪದ್ಧತಿಗಳು ಎಂದಿನಂತೆ ಮುಂದುವರಿಯುತ್ತವೆ ಎಂದಿದ್ದಾರೆ.
2017ರಲ್ಲಿ ತ್ರಿವಳಿ ತಲಾಖ್ ಪದ್ಧತಿ ನಿಷೇಧಿಸಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.