ADVERTISEMENT

Hathras Stampede | ಬಹುತೇಕ ಮೃತದೇಹಗಳ ಗುರುತು ಪತ್ತೆ: ಉ.ಪ್ರದೇಶ ಸರ್ಕಾರ

ಪಿಟಿಐ
Published 3 ಜುಲೈ 2024, 1:54 IST
Last Updated 3 ಜುಲೈ 2024, 1:54 IST
<div class="paragraphs"><p>ಹಾಥರಸ್‌ ಕಾಲ್ತುಳಿತ</p></div>

ಹಾಥರಸ್‌ ಕಾಲ್ತುಳಿತ

   

(ಪಿಟಿಐ ಚಿತ್ರ)

ಹಾಥರಸ್: ಉತ್ತರ ಪ್ರದೇಶದ ಹಾಥರಸ್‌ ಜಿಲ್ಲೆಯ ಸಿಕಂದರಾ ರಾವ್ ಪ್ರದೇಶದಲ್ಲಿ ಮಂಗಳವಾರ ಆಯೋಜಿಸಿದ್ದ 'ಸತ್ಸಂಗ' ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದಿಂದಾಗಿ ಕನಿಷ್ಠ 116 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ADVERTISEMENT

ಈ ಪೈಕಿ ಬಹುತೇಕ ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ ಎಂದು ಉತ್ತರ ಪ್ರದೇಶದ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಉಳಿದ ಮೃತದೇಹಗಳ ಗುರುತು ಪತ್ತೆ ಹಚ್ಚಲು ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದೆ.

ಸತ್ಸಂಗ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳ ಹಾಗೂ ನೆರೆಯ ರಾಜ್ಯಗಳಿಂದ ಜನರು ಭಾರಿ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಮೃತಪಟ್ಟವರಲ್ಲಿ 108 ಮಹಿಳೆಯರು, 7 ಮಕ್ಕಳು ಮತ್ತು ಒಬ್ಬ ಪುರುಷ ಸೇರಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್ ಸಿಂಗ್ ತಿಳಿಸಿದ್ದಾರೆ.

ಕಾರ್ಯಕ್ರಮ ಮುಕ್ತಾಯಗೊಂಡ ನಂತರ, ಸಭಾಂಗಣದಿಂದ ಹೊರಹೋಗಲು ಜನ ದೊಡ್ಡಸಂಖ್ಯೆಯಲ್ಲಿ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.