ನವದೆಹಲಿ: ಕಳೆದ ವರ್ಷ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಹಾಗೂ ಪಕ್ಕದ ಕೋಲಾರ, ತುಮಕೂರು ಜಿಲ್ಲೆಗಳು ತೀವ್ರ ಬರಗಾಲ ಎದುರಿಸಿದ್ದು, ಈ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಬೇಕೆಂದು ಸಂಸದ ಡಾ. ಕೆ. ಸುಧಾಕರ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
ಲೋಕಸಭೆಯಲ್ಲಿ ಸೋಮವಾರ ಗಮನ ಸೆಳೆಯುವ ಸೂಚನೆಯಡಿ ವಿಷಯ ಪ್ರಸ್ತಾಪಿಸಿದ ಅವರು, ‘ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ 1500 ಅಡಿಗೆ ಇಳಿದಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕುವ ಬದಲು, ರಾಜ್ಯ ಸರ್ಕಾರ ಸಂಸ್ಕರಿತ ನೀರನ್ನು ಈ ಜಿಲ್ಲೆಗಳ ಕೆರೆಗಳಿಗೆ ಹರಿಸುತ್ತಿದೆ’ ಎಂದು ಕಿಡಿಕಾರಿದರು.
ಕೃಷ್ಣಾ ನದಿಯಿಂದ ಕನಿಷ್ಠ 5 ಟಿಎಂಸಿ ನೀರನ್ನು ಈ ಭಾಗಕ್ಕೆ ಸರಬರಾಜು ಮಾಡಬಹುದು. ಇದಕ್ಕಾಗಿ ಕಾಲುವೆಗಳನ್ನು ನಿರ್ಮಾಣ ಮಾಡಬಹುದು. ಹಾಗೆಯೇ ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಪಾಲಾರ್, ಪೆನ್ನಾರ್ ಮತ್ತು ಚಿತ್ರಾವತಿ ನದಿಗಳಲ್ಲಿ ವಿಶೇಷ ಜಲಾನಯನ ಯೋಜನೆ ರೂಪಿಸಬೇಕು’ ಎಂದು ಅವರು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.