ಭೋಪಾಲ್: ಮಧ್ಯಪ್ರದೇಶದ ಸಚಿವರು ಇನ್ನು ಮುಂದೆ ತಾವು ಪಡೆಯುವ ವೇತನ ಮತ್ತು ಸವಲತ್ತುಗಳಿಗೆ ತಾವೇ ಆದಾಯ ತೆರಿಗೆ ಪಾವತಿಸಬೇಕು. ಇಲ್ಲಿಯವರೆಗೆ ಈ ಹೊರೆಯನ್ನು ರಾಜ್ಯ ಸರ್ಕಾರ ಭರಿಸುತ್ತಿತ್ತು.
ಈ ಸಂಬಂಧ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ನೇತೃತ್ವದ ಸಂಪುಟ ಸಭೆ ಮಂಗಳವಾರ ನಿರ್ಧಾರ ತೆಗೆದುಕೊಂಡಿದೆ.
1972ರ ನಿಯಮದ ಪ್ರಕಾರ ಸಚಿವರ ವೇತನ ಮತ್ತು ಸವಲತ್ತುಗಳ ಮೇಲಿನ ಆದಾಯ ತೆರಿಗೆಯನ್ನು ರಾಜ್ಯ ಸರ್ಕಾರ ಭರಿಸುತ್ತಿತ್ತು. ಈ ನಿಯಮವನ್ನು ರದ್ದುಗೊಳಿಸಲು ಸಂಪುಟ ನಿರ್ಧರಿಸಿದೆ. ಅಲ್ಲದೆ, ಎಲ್ಲ ಸಚಿವರು ತಮ್ಮ ಆದಾಯ ತೆರಿಗೆಯನ್ನು ತಾವೇ ಪಾವತಿಸುವುದಕ್ಕೆ ಸಮ್ಮತಿ ಸೂಚಿಸಿದೆ ಎಂದು ಮುಖ್ಯಮಂತ್ರಿ ಯಾದವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.