ಕೋಲ್ಕತ್ತ: ಮೊದಲ ಬಾರಿ ಸಂಸದೆಯಾಗಿ ಆಯ್ಕೆಯಾದ ಬಂಗಾಳಿ ನಟಿ ನುಸ್ರತ್ ಜಹಾನ್ ಒಂದಿಲ್ಲೊಂದು ಕಾರಣಗಳಿಗಾಗಿ ಸುದ್ದಿಯಾಗುತ್ತಲೇ ಇದ್ದವರು. ನುಸ್ರತ್ ಇದೀಗ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ತೃಣಮೂಲ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದು ಬಸಿರ್ಹತ್ ಕ್ಷೇತ್ರದಿಂದ ಆಯ್ಕೆಯಾಗಿರುವ ನುಸ್ರತ್, ಉಸಿರಾಟದ ಸಮಸ್ಯೆಯಿಂದಾಗಿ ಭಾನುವಾರ ರಾತ್ರಿ 9.30ರ ಸುಮಾರಿಗೆ ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರಿಗೆಮೊದಲಿಂದಲೂ ಅಸ್ತಮಾ ಸಮಸ್ಯೆ ಇತ್ತು. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ನುಸ್ರತ್ ಆರೋಗ್ಯ ಸ್ಥಿರವಾಗಿದೆಎಂದು ಕುಟುಂಬದವರು ತಿಳಿಸಿದ್ದಾರೆ.
ಜೂನ್ 25ರಂದು ಸಂಸತ್‌ನಲ್ಲಿ ಪ್ರಮಾಣ ವಚನ ಸಮಾರಂಭಕ್ಕೆ ನುಸ್ರತ್, ಹಣೆಗೆ ಸಿಂಧೂರವನ್ನಿಟ್ಟುಕೊಂಡು ಇಸ್ಲಾಮಿಕ್ ಅಲ್ಲದ ರೀತಿಯ ಉಡುಗೆ ಧರಿಸಿ ಬಂದಿದ್ದರಿಂದ ಆಕೆ ವಿರುದ್ಧ ಮುಸ್ಲಿಂ ಪ್ರಚಾರಕರು ಫತ್ವಾ ಹೊರಡಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ್ದ ನುಸ್ರತ್, ನಾನು ಜಾತಿ, ಪಂಥ ಮತ್ತು ಧರ್ಮಗಳ ತಡೆಗೋಡೆಯಿಂದಾಚೆಯಿರುವ ಎಲ್ಲರನ್ನೊಳಗೊಂಡ ಭಾರತವನ್ನು ಪ್ರತಿನಿಧಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.