ADVERTISEMENT

ಸಿದ್ದರಾಮಯ್ಯ ವಿರುದ್ಧ ಯದುವೀರ್ ಸುದ್ದಿಗೋಷ್ಠಿ: ‘ಈಗಾಲಾದರೂ ರಾಜೀನಾಮೆ ಕೊಡಿ’

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 6:41 IST
Last Updated 19 ಅಕ್ಟೋಬರ್ 2024, 6:41 IST
<div class="paragraphs"><p>ಯದುವೀರ್. ಸಿದ್ದರಾಮಯ್ಯ </p></div>

ಯದುವೀರ್. ಸಿದ್ದರಾಮಯ್ಯ

   

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಮುಡಾದಲ್ಲಿ ₹5 ಸಾವಿರ ಕೋಟಿ ಮೊತ್ತದ ಹಗರಣ ನಡೆದಿದೆ. ಮುಖ್ಯಮಂತ್ರಿ ಕುಟುಂಬವೇ ನಿವೇಶನಗಳ ಫಲಾನುಭವಿ ಆಗಿರುವ ಕಾರಣ ಸ್ವತಂತ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ಈ ಹಿಂದಿನಿಂದಲೂ ಒತ್ತಾಯಿಸುತ್ತ ಬಂದಿದೆ. ರಾಜ್ಯಪಾಲರು ಸಹ ತನಿಖೆಗೆ ಸೂಚಿಸಿದ್ದಾರೆ. ಈಗಾಲಾದರೂ ಪ್ರಕರಣವನ್ನು ಸಿಬಿಐಗೆ ವಹಿಸಬೇಕು’ ಎಂದು ಅವರು ಆಗ್ರಹಿಸಿದರು.

ADVERTISEMENT

‘ಸತತ ಮೂರು ಬಾರಿ ಇ.ಡಿ. ದಾಖಲೆ ಕೇಳಿದ್ದರೂ ಮುಡಾ ಅಧಿಕಾರಿಗಳು ನೀಡಿಲ್ಲ. ಹೀಗಾಗಿಯೇ ಈ ದಾಳಿ ನಡೆದಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡದೇ ಇದ್ದರೆ ಬಿಜೆಪಿ ಕಾನೂನಾತ್ಮಕ ಹೋರಾಟ ಮುಂದುವರಿಸಲಿದೆ’ ಎಂದರು. ‘ ಇ.ಡಿ. ದಾಳಿ ರಾಜಕೀಯ ಪ್ರೇರಿತ ಅಲ್ಲ. ಕೇವಲ 14 ನಿವೇಶನಗಳು ಮಾತ್ರವಲ್ಲ, ಇಡೀ ಹಗರಣದ ಸಮಗ್ರ ತನಿಖೆ ಆಗಬೇಕು’ ಎಂದು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.