ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತ ಶನಿವಾರ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು.
ಗುಪ್ತಾ ಅವರು ಕಳೆದ ಮೂರು ತಿಂಗಳಿಂದ ಶ್ವಾಸಕೋಶ ಸೋಂಕು ಮತ್ತು ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಸಂಬಂಧ ಇಲ್ಲಿನ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಸಮಾಜವಾದಿ ಪಕ್ಷದ ಮೂಲಗಳು ತಿಳಿಸಿವೆ.
ಗುಪ್ತಾ ಅವರು ಮುಲಾಯಂ ಅವರ ಎರಡನೇ ಪತ್ನಿ. ಯಾದವ್ ಅವರ ಮೊದಲನೇ ಪತ್ನಿ, ಎಸ್ಪಿ ಮುಖ್ಯಸ್ಥ ಅಖಿಲೇಶ್ ಸಿಂಗ್ ಅವರ ತಾಯಿ ಮಾಲ್ತಿ ದೇವಿ ಅವರು 2003ರಲ್ಲಿ ನಿಧನರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.