ನವದೆಹಲಿ: ಅಗರ್ತಲಾ– ಮುಂಬೈ ನಡುವೆ ಸಂಚರಿಸುವ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲು ಗುರುವಾರ ಮಧ್ಯಾಹ್ನ 3.55ರ ವೇಳೆಗೆ ಅಸ್ಸಾಂನ ಡಿಬಾಲೊಂಗ್ ಬಳಿ ಹಳಿ ತಪ್ಪಿದೆ ಎಂದು ರೈಲ್ವೆ ವಕ್ತಾರರು ತಿಳಿಸಿದ್ದಾರೆ.
ರೈಲಿನ ಎಂಜಿನ್, ‘ಪವರ್ ಕಾರ್’ ಸೇರಿದಂತೆ ಒಟ್ಟು ಎಂಟು ಕೋಚ್‌ಗಳು ಹಳಿ ತಪ್ಪಿದ್ದು, ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ಈಶಾನ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್‌ಒ) ಹೇಳಿದ್ದಾರೆ.
ಲಾಮ್‌ಡಿಂಗ್ ವಿಭಾಗದ ಲಾಮ್‌ಡಿಂಗ್–ಬರ್ದಾರ್ಪುರ್ ಮಾರ್ಗದಲ್ಲಿ ಈ ಅವಘಡ ಸಂಭವಿಸಿದೆ. ರಕ್ಷಣಾ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿದ್ದು, ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.