ADVERTISEMENT

ಮುಂಬೈಯಲ್ಲಿ 30 ದಿನಗಳವರೆಗೆ ಪ್ಯಾರಾಗ್ಲೈಡರ್‌, ಡ್ರೋನ್‌ ಹಾರಾಟ ನಿಷೇಧ

ಪಿಟಿಐ
Published 29 ಅಕ್ಟೋಬರ್ 2024, 12:44 IST
Last Updated 29 ಅಕ್ಟೋಬರ್ 2024, 12:44 IST
<div class="paragraphs"><p>ಡ್ರೋನ್‌ </p></div>

ಡ್ರೋನ್‌

   

(ಸಾಂದರ್ಭಿಕ ಚಿತ್ರ)

ಮುಂಬೈ: ನಗರದಲ್ಲಿ ಡ್ರೋನ್‌ಗಳು, ರಿಮೋಟ್ ಕಂಟ್ರೋಲ್ ಮೈಕ್ರೋಲೈಟ್ ಏರ್‌ಕ್ರಾಫ್ಟ್‌ಗಳು, ಪ್ಯಾರಾಗ್ಲೈಡರ್‌ಗಳು ಮತ್ತು ಹಾಟ್ ಏರ್ ಬಲೂನ್‌ಗಳ ಹಾರಾಟವನ್ನು 30 ದಿನಗಳವರೆಗೆ ಮುಂಬೈ ಪೊಲೀಸರು ನಿಷೇಧಿಸಿದ್ದಾರೆ.

ADVERTISEMENT

ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 163ರ ಅಡಿಯಲ್ಲಿ ಈ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ಅಕ್ಟೋಬರ್ 31ರಿಂದ ನವೆಂಬರ್ 29ರವರೆಗೂ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಉಗ್ರರು ಮತ್ತು ಸಮಾಜವಿರೋಧಿ ಶಕ್ತಿಗಳು ವಿವಿಐಪಿಗಳನ್ನು ಗುರಿಯಾಗಿಸಲು, ಪ್ರಾಣಕ್ಕೆ ಅಪಾಯವನ್ನುಂಟುಮಾಡಲು ಮತ್ತು ಸಾರ್ವಜನಿಕ ಆಸ್ತಿಯನ್ನು ನಾಶಮಾಡಲು ಡ್ರೋನ್‌ಗಳು, ಮೈಕ್ರೋಲೈಟ್ ಏರ್‌ಕ್ರಾಫ್ಟ್ ಹಾಗೂ ಪ್ಯಾರಾಗ್ಲೈಡರ್‌ಗಳನ್ನು ಬಳಸುವ ಸಾಧ್ಯತೆ ಇದೆ. ಇಂತಹ ವಿಧ್ವಂಸಕ ಕೃತ್ಯಗಳನ್ನು ತಡೆಯಲು ಸಲುವಾಗಿ ನಿರ್ಬಂಧಗಳನ್ನು ಹೇರಲಾಗಿದೆ’ ಎಂದು ಅವರು ಹೇಳಿದ್ದಾರೆ.

ನಿರ್ಬಂಧಗಳನ್ನು ಉಲ್ಲಂಘಿಸಿದವರಿಗೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 223ರ ಅಡಿಯಲ್ಲಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್‌ 20ರಂದು ಒಂದೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. 23ರಂದು ಫಲಿತಾಂಶ ಹೊರಬೀಳಲಿದೆ. ಜತೆಗೆ, ನವೆಂಬರ್ 26ರಂದು (26‌‌‌‌/11) ಮುಂಬೈಯಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಗೆ 16 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ಮುಂಬೈನಗರ ಬಿಗಿ ಪೊಲೀಸ್ ಭದ್ರತೆಗೆ ಸಾಕ್ಷಿಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.