ಮುಂಬೈ: ಸ್ಥಳೀಯ ಶಿವಸೇನೆ ಶಾಸಕರೊಬ್ಬರ ಪತ್ನಿ ಭಾನುವಾರ ರಾತ್ರಿ ಕುರ್ಲಾ ಉಪನಗರದ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಸೇನಾ ಶಾಸಕ ಮಂಗೇಶ್ ಕುಡಾಳ್ಕರ್ ಅವರ ಪತ್ನಿಯಾದ ರಜನಿ ಕುಡಾಳ್ಕರ್ ಅವರ ಮೃತದೇಹ ನೆಹರು ನಗರದ ಡಿಗ್ನಿಟಿ ಕೋಆಪರೇಟಿವ್ ಸೊಸೈಟಿ ಫ್ಲಾಟ್‌ನಲ್ಲಿ ರಾತ್ರಿ 8.30ರ ಸುಮಾರಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಎಡಿಆರ್ ದಾಖಲಾಗಿದೆ ಮತ್ತು ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.
ಮಂಗೇಶ್ ಕುಡಾಳ್ಕರ್ ಅವರು ಕುಲ್ರಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.