ADVERTISEMENT

ಹಿಂಸಾಚಾರದ ಎದುರು ನಿಲ್ಲುವುದನ್ನು ದೇಶ ಮುಂದುವರಿಸಲಿದೆ: ರಾಹುಲ್‌ ಗಾಂಧಿ

ಪಿಟಿಐ
Published 26 ನವೆಂಬರ್ 2022, 10:56 IST
Last Updated 26 ನವೆಂಬರ್ 2022, 10:56 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ‘ಹಿಂಸಾಚಾರದ ಎದುರುನಿರ್ಭಯದಿಂದ ನಿಲ್ಲುವುದನ್ನುಭಾರತವು ಮುಂದುವರಿಸಲಿದೆ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಶನಿವಾರ ಹೇಳಿದ್ದಾರೆ. 2008ರಲ್ಲಿ ಮುಂಬೈನಲ್ಲಿ ನಡೆದಿದ್ದ ಉಗ್ರರ ದಾಳಿಯಲ್ಲಿ ಮಡಿದವರಿಗೆ ಗೌರವ ಸಲ್ಲಿಸಿಅವರು ಹೀಗೆ ಟ್ವೀಟ್‌ ಮಾಡಿದ್ದಾರೆ.

‘ಭಾರತವನ್ನು ರಕ್ಷಿಸಲು ಎಲ್ಲವನ್ನೂ ತ್ಯಾಗ ಮಾಡಿದ ಭದ್ರತಾ ಸಿಬ್ಬಂದಿ ನಮ್ಮ ದೇಶದ ಹೆಮ್ಮೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸೈನಿಕರು ಮತ್ತು ಸಾಮಾನ್ಯ ಜನರಿಗೆ ಗೌರವ ಸಲ್ಲಿಸುತ್ತೇನೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

2008ರ ನವೆಂಬರ್‌ 26ರಂದು ಪಾಕಿಸ್ತಾನ ಮೂಲದ ಲಷ್ಕರ್‌–ಎ–ತೊಯಬಾ ಸಂಘಟನೆಯ 10 ಉಗ್ರರು ಜಲಮಾರ್ಗದಿಂದ ಮುಂಬೈ ತಲುಪಿ ನಾಗರಿಕ ಮೇಲೆ ದಾಳಿ ನಡೆಸಿದ್ದರು. ಈ ವೇಳೆ 16 ಭದ್ರತಾ ಸಿಬ್ಬಂದಿ, 26 ವಿದೇಶಿಯರು ಸೇರಿ 166 ಜನರು ಸಾವಿಗೀಡಾಗಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.