ಮುಂಬೈ: ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8ಕ್ಕೆ ಆರಂಭವಾಗಿದ್ದು, ಪ್ರಗತಿಯಲ್ಲಿದೆ.
ಈ ನಡುವೆ ವಿರೋಧ ಪಕ್ಷವಾದ ಮಹಾ ವಿಕಾಸ ಅಘಾಡಿ (ಎಂವಿಎ), ಬಹುಮತ ಪಡೆಯುವ ಹುಮ್ಮಸ್ಸಿನಲ್ಲಿದೆ.
ರಾಜ್ಯದಲ್ಲಿ ಒಂದು ವೇಳೆ ಅಧಿಕಾರಕ್ಕೆ ಬಂದರೆ ಸರ್ಕಾರ ರಚಿಸುವ ನಿಟ್ಟಿನಲ್ಲಿ ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ 160ಕ್ಕೂ ಅಧಿಕ ಅಭ್ಯರ್ಥಿಗಳ ಬೆಂಬಲ ಪತ್ರವನ್ನು ಸಂಗ್ರಹಿಸಿದೆ.
ಬಹುಮತ ಪಡೆದಲ್ಲಿ ರಾಜ್ಯಪಾಲರಿಗೆ ಬೆಂಬಲ ಪತ್ರಗಳನ್ನು ಸಲ್ಲಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು.
ಮಹಾ ವಿಕಾಸ ಅಘಾಡಿ ಮೈತ್ರಿಯಲ್ಲಿ ಕಾಂಗ್ರೆಸ್ 101, ಶಿವ ಸೇನಾ (ಯುಬಿಟಿ) 95, ಎನ್‌ಸಿಪಿ (ಎಸ್‌ಪಿ) 85 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮತ್ತೊಂದೆಡೆ ಮಹಾಯುತಿ ಮೈತ್ರಿಯ ಪೈಕಿ ಬಿಜೆಪಿ 149, ಶಿವ ಸೇನಾ 81, ಎನ್‌ಸಿಪಿ (ಅಜಿತ್ ಪವಾರ್ ಬಣ) 59 ಸ್ಥಾನಗಳಲ್ಲಿ ಸ್ಪರ್ಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.