ಜೈಪುರ: ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಗೂ ಮುನ್ನ ರಾಜಸ್ಥಾನದಲ್ಲಿ ನಾಯಕತ್ವ ಬದಲಾವಣೆಯಾಗುವ ಸಾಧ್ಯತೆಗಳಿವೆ ಎಂಬ ಊಹಾಪೋಹದ ನಡುವೆ ಮಾತನಾಡಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ‘ನನ್ನ ರಾಜೀನಾಮೆ ಪತ್ರ ಈಗಾಗಲೇ ಸೋನಿಯಾ ಗಾಂಧಿ ಅವರ ಬಳಿ ಇದೆ’ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಗುರುವಾರ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದರು. ಹದಿನೈದು ದಿನಗಳಲ್ಲಿ ಸೋನಿಯಾ–ಪೈಲಟ್ ನಡುವೆ ನಡೆದ ಎರಡನೇ ಭೇಟಿ ಇದಾಗಿದ್ದರಿಂದ ರಾಜಸ್ಥಾನದಲ್ಲಿ ನಾಯಕತ್ವದಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿವೆ ಎಂಬ ಊಹಾಪೋಹಗಳು ರಾಜ್ಯ ರಾಜಕಾರಣದಲ್ಲಿ ಮನೆ ಮಾಡಿದ್ದವು.
ಹೀಗಾಗಿ ಶನಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಸಿಎಂ ಗೆಹ್ಲೋಟ್, ‘ನನ್ನ ರಾಜೀನಾಮೆ ಪತ್ರ ಶಾಶ್ವತವಾಗಿ ಸೋನಿಯಾ ಗಾಂಧಿ ಅವರ ಬಳಿ ಇದೆ. ಹಾಗಾಗಿ ಸಿಎಂ ಬದಲಾಗುತ್ತಾರೆಯೇ ಎಂದು ಪದೇ ಪದೇ ಕೇಳುವುದರಲ್ಲಿ ಅರ್ಥವಿಲ್ಲ. ಮುಖ್ಯಮಂತ್ರಿ ಬದಲಾವಣೆ ಆಗಬೇಕಾದಾಗ ಬದಲಾಗುತ್ತಾರೆ. ಅದರ ಬಗ್ಗೆ ಯಾರಿಗೂ ಏನೂ ಗೊತ್ತಾಗುವುದಿಲ್ಲ,’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.