ADVERTISEMENT

ಮಿಜೋರಾಂನಲ್ಲಿ ಮ್ಯಾನ್ಮಾರ್‌ ಸೇನಾ ವಿಮಾನ ಅಪಘಾತ: ಆರು ಜನರಿಗೆ ಗಾಯ

ಏಜೆನ್ಸೀಸ್
Published 23 ಜನವರಿ 2024, 10:54 IST
Last Updated 23 ಜನವರಿ 2024, 10:54 IST

ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣ ಬಳಿ ಮಂಗಳವಾರ ಅಪಘಾತಕ್ಕೀಡಾದ ಮ್ಯಾನ್ಮಾರ್ ಸೇನಾ ವಿಮಾನ

ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣ ಬಳಿ ಮಂಗಳವಾರ ಅಪಘಾತಕ್ಕೀಡಾದ ಮ್ಯಾನ್ಮಾರ್ ಸೇನಾ ವಿಮಾನ

ಲೆಂಗ್‌ಪುಯಿ: ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದಲ್ಲಿ ಮ್ಯಾನ್ಮಾರ್‌ಗೆ ಸೇರಿದ ಸೇನಾ ವಿಮಾನ ಅಪಘಾತಕ್ಕೀಡಾಗಿದ್ದು, ಆರು ಜನ ಗಾಯಗೊಂಡಿದ್ದಾರೆ.

ಈ ಲಘು ವಿಮಾನದಲ್ಲಿ ಒಟ್ಟು 14 ಜನ ಪ್ರಯಾಣಿಸುತ್ತಿದ್ದರು ಎಂದು ಮೀಜೋರಾಂ ಡಿಜಿಪಿ ತಿಳಿಸಿದ್ದಾರೆ.

ADVERTISEMENT

‘ಅಪಘಾತದಲ್ಲಿ ಒಟ್ಟು ಆರು ಜನ ಗಾಯಗೊಂಡಿದ್ದಾರೆ. ಉಳಿದ 8 ಜನ ಸುರಕ್ಷಿತವಾಗಿದ್ದಾರೆ. ಇವರನ್ನು ಲೆಂಗಪುಯಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದಿದ್ದಾರೆ.

ವಿಮಾನವು ಲ್ಯಾಂಡ್ ಆಗುವ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ ಎಂದು ಡಿಜಿಪಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.