ADVERTISEMENT

ಬಾಂಬ್ ಬೆದರಿಕೆ: ಭಯೋತ್ಪಾದನೆ ಬಗ್ಗೆ ಪುಸ್ತಕ ಬರೆದಿದ್ದ ವ್ಯಕ್ತಿಯಿಂದ ಕೃತ್ಯ?

ಪಿಟಿಐ
Published 29 ಅಕ್ಟೋಬರ್ 2024, 9:23 IST
Last Updated 29 ಅಕ್ಟೋಬರ್ 2024, 9:23 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ದೇಶದಾದ್ಯಂತ ಹಲವು ದಿನಗಳಿಂದ ವಿವಿಧ ವಿಮಾನಯಾನ ಸಂಸ್ಥೆಗಳ ಹಲವು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಿದ ಶಂಕಿತ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

‘ಆರೋಪಿಯನ್ನು ಮಹಾರಾಷ್ಟ್ರದ ನಾಗ್ಪುರದ ಗೊಂಡಿಯಾ ಮೂಲದ 35 ವರ್ಷದ ಜಗದೀಶ್ ಉಯ್ಕೆ ಎಂದು ಗುರುತಿಸಲಾಗಿದೆ. ಈತ ಭಯೋತ್ಪಾದನೆ ಬಗ್ಗೆ ಪುಸ್ತಕ ಬರೆದಿದ್ದ ಎನ್ನಲಾಗಿದೆ. ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಆರೋಪ ಹಿನ್ನೆಲೆಯಲ್ಲಿ 2021ರಲ್ಲಿ ಪ್ರಕರಣವೊಂದರಲ್ಲಿ ಆತನನ್ನು ಬಂಧಿಸಲಾಗಿತ್ತು’ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

‘ಡಿಸಿಪಿ ಶ್ವೇತಾ ಖೇಡ್ಕರ್ ನೇತೃತ್ವದ ತನಿಖಾ ತಂಡವು ಬಾಂಬ್ ಬೆದರಿಕೆ ಸಂದೇಶ ಬಂದಿದ್ದ ಇ–ಮೇಲ್‌ಗಳನ್ನು ಪರಿಶೀಲನೆ ನಡೆಸಿತ್ತು. ಇದರ ಬೆನ್ನಲ್ಲೇ ಆರೋಪಿ ರಾಜ್ಯದಿಂದ ಪರಾರಿಯಾಗಿರುವುದು ತಿಳಿದು ಬಂದಿದ್ದು, ಆತನ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಆರೋಪಿಯು ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ), ಕೇಂದ್ರ ರೈಲ್ವೆ ಸಚಿವರು, ವಿಮಾನಯಾನ ಸಂಸ್ಥೆಗಳು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಡಿಸಿಎಂ ದೇವೇಂದ್ರ ಫಡಣವೀಸ್, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಮತ್ತು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ಬೆದರಿಕೆ ಇ–ಮೇಲ್‌ಗಳನ್ನು ಕಳುಹಿಸಿರುವುದು ದೃಢಪಟ್ಟಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ದೇಶಾದದ್ಯಂತ 15 ದಿನಗಳಲ್ಲಿ ಒಟ್ಟಾರೆ 410ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆಗಳು ಬಂದಿವೆ. ಹೆಚ್ಚಿನ ಬೆದರಿಕೆ ಸಂದೇಶಗಳು ಸಾಮಾಜಿಕ ಮಾಧ್ಯಮಗಳ ಮೂಲಕವೇ ಬಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.