ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಾಣ ಮಾಡಿದ ಸಾಕ್ಷ್ಯಚಿತ್ರ ಪ್ರದರ್ಶನ ಸಂಬಂಧ ಇಲ್ಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿವಾದ ಉಂಟಾದ ಬೆನ್ನಲ್ಲೇ ಇದೀಗ ಜಾಮಿಯ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲೂ ಗಲಾಟೆ ಆರಂಭವಾಗಿದೆ.
ಎಡಪಕ್ಷ ಬೆಂಬಲಿತ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್ಐ) ನಿಷೇಧಿತ ಸಾಕ್ಷ್ಯಚಿತ್ರವನ್ನು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಸಂಜೆ 6 ಗಂಟೆಗೆ ಪ್ರದರ್ಶನ ಮಾಡುವುದಾಗಿ ಹೇಳಿದೆ.
ಈ ಸಂಬಂಧ ಎಸ್‌ಎಫ್‌ಐನ ಜಾಮಿಯ ಘಟಕವು ಪೋಸ್ಟರ್ ಕೂಡ ಬಿಡುಗಡೆ ಮಾಡಿದೆ.
ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಅನುಮತಿ ಕೋರಿಲ್ಲ, ಹೀಗಾಗಿ ಪ್ರದರ್ಶನ ಮಾಡಲು ಬಿಡುವುದಿಲ್ಲ ಎಂದು ಆಡಳಿತ ಮಂಡಳಿ ಹೇಳಿದೆ.
‘ಪ್ರದರ್ಶನ ಸಂಬಂಧ ಯಾವುದೇ ಅನುಮತಿ ಕೋರಿಲ್ಲ. ಹೀಗಾಗಿ ನಾವು ಪ್ರದರ್ಶನ ಮಾಡಲು ಬಿಡುವುದಿಲ್ಲ. ವಿದ್ಯಾರ್ಥಿಗಳು ಅವರದ್ದೇ ಹಾದಿ ತುಳಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು‘ ಎಂದು ಜಾಮಿಯಾದ ಅಧಿಕಾರಿಗಳು ಹೇಳಿದ್ದಾರೆ.
ಈಗಾಗಲೇ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿವಿಯ ಗೇಟ್ ಮುಂಭಾಗದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಅಶ್ರುವಾಯು ಹಾಗೂ ಜಲಫಿರಂಗಿ ವಾಹನಗಳು ಕೂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.