ADVERTISEMENT

ಒಲಿಂಪಿಕ್ಸ್‌ನಲ್ಲಿ ಉತ್ತಮ ಸಾಧನೆಗೆ ಮೋದಿ ಸರ್ಕಾರದ ನೀತಿಯೂ ಕಾರಣ: ಸೊನೊವಾಲ್

ಪಿಟಿಐ
Published 8 ಆಗಸ್ಟ್ 2021, 3:30 IST
Last Updated 8 ಆಗಸ್ಟ್ 2021, 3:30 IST
ಸರ್ಬಾನಂದ ಸೊನೊವಾಲ್ ಮತ್ತು ಪ್ರಧಾನಿ ನರೇಂದ್ರ ಮೋದಿ (ಪಿಟಿಐ ಚಿತ್ರ)
ಸರ್ಬಾನಂದ ಸೊನೊವಾಲ್ ಮತ್ತು ಪ್ರಧಾನಿ ನರೇಂದ್ರ ಮೋದಿ (ಪಿಟಿಐ ಚಿತ್ರ)   

ನವದೆಹಲಿ: ಒಲಿಂಪಿಕ್ಸ್‌ನಲ್ಲಿ ಈ ಬಾರಿ ಭಾರತದ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಲು ನರೇಂದ್ರ ಮೋದಿ ಸರ್ಕಾರದ ‘ಟಾಪ್ಸ್ (ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಸ್ಕೀಮ್/ ಟಿಒಪಿಎಸ್)’ ಯೋಜನೆಯೂ ಕಾರಣ ಎಂದು ಕೇಂದ್ರ ಸಚಿವ ಸರ್ಬಾನಂದ ಸೊನೊವಾಲ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ 2014ರ ಸೆಪ್ಟೆಂಬರ್‌ನಲ್ಲಿ ಯೋಜನೆ ಆರಂಭಗೊಂಡಿತ್ತು ಎಂದು ಅವರು ತಿಳಿಸಿದ್ದಾರೆ.

ಸಂಭಾವ್ಯ ಪದಕ ವಿಜೇತರನ್ನು ಗುರುತಿಸಲು ತಜ್ಞರನ್ನು ಒಳಗೊಂಡ ಆಯ್ಕೆ ಸಮಿತಿಯನ್ನು ನೇಮಿಸಲಾಗಿತ್ತು. ಹಾಲಿ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅದನ್ನು ಮುನ್ನಡೆಸಿದರು ಎಂದೂ ಸೊನೊವಾಲ್ ಹೇಳಿದ್ದಾರೆ.

ಈ ಯೋಜನೆ ಅಡಿಯಲ್ಲಿ ಸರ್ಕಾರವು ಅಥ್ಲೀಟ್‌ಗಳಿಗೆ ಹಣಕಾಸು ನೆರವು, ತರಬೇತಿ, ಕೋಚಿಂಗ್ ಮತ್ತು ವೈದ್ಯಕೀಯ ನೆರವು ನೀಡಿದೆ. 2020ರ ಒಲಿಂಪಿಕ್ಸ್‌ನಲ್ಲಿ ಪದಕಗಳನ್ನು ಗೆಲ್ಲುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿತ್ತು ಎಂದು ಅವರು ಹೇಳಿದ್ದಾರೆ.

ಸರ್ಬಾನಂದ ಸೊನೊವಾಲ್ ಅವರು ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ 2017ರ ವರೆಗೆ ಕ್ರೀಡಾ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.