ADVERTISEMENT

ಪ್ರಧಾನಿ ನೇತೃತ್ವದ ನೀತಿ ಆಯೋಗದ ಸಭೆಗೆ ಗೈರಾದ ನಿತೀಶ್‌ ಕುಮಾರ್‌, ಕೆಸಿಆರ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಆಗಸ್ಟ್ 2022, 10:12 IST
Last Updated 7 ಆಗಸ್ಟ್ 2022, 10:12 IST
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ನೀತಿ ಆಯೋಗದ ಸಭೆ
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ನೀತಿ ಆಯೋಗದ ಸಭೆ   

ನವದೆಹಲಿ: ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆಯುತ್ತಿರುವ ನೀತಿ ಆಯೋಗದ ಸಭೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಗೈರಾಗಿದ್ದಾರೆ. ಈ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದಾರೆ.

ನಿತೀಶ್‌ ಕುಮಾರ್‌ ಅವರಿಗೆ ಕೋವಿಡ್‌ ಸೋಂಕು ಕಾಣಿಸಿಕೊಂಡಿರುವುದರಿಂದ ಸಭೆ ಹಾಜರಾಗಿಲ್ಲವೆಂದು ತಿಳಿದುಬಂದಿದೆ. ನೀತಿ ಆಯೋಗದ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿಗಳಿಗಷ್ಟೇ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಬಿಹಾರದಿಂದ ಯಾವುದೇ ಪ್ರತಿನಿಧಿ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ.

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುತ್ತಿಲ್ಲವೆಂದು ಕೆಸಿಆರ್‌ ಹೇಳಿದ್ದಾರೆ. ಈ ಕುರಿತು ಪ್ರಧಾನಿ ಮೋದಿಗೆ ಪತ್ರವನ್ನೂ ಬರೆದಿದ್ದಾರೆ. ‘ಜನರ ಅಗತ್ಯಗಳನ್ನು ಪೂರೈಸಲು ರಾಜ್ಯ ಸರ್ಕಾರಗಳು ಯೋಜನೆಗಳನ್ನು ರೂಪಿಸಬೇಕಿದೆ. ಆದರೆ, ಈ ಯೋಜನೆಗಳಿಗೆ ಕೇಂದ್ರವು ಸಹಕರಿಸುತ್ತಿಲ್ಲ’ ಎಂದು ರಾವ್‌ ಹರಿಹಾಯ್ದಿದ್ದಾರೆ.

ADVERTISEMENT

ಆಯೋಗದ ಸದಸ್ಯರು ಹಾಗೂ ಮುಖ್ಯಮಂತ್ರಿಗಳಿಗೆ 2019ರ ಜುಲೈ ನಂತರ ಇದು ಮೊದಲ ಭೌತಿಕ ಸಭೆಯಾಗಿದೆ.

ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆಯಲಿರುವ ಸಭೆಯ ಕಾರ್ಯಸೂಚಿಯಲ್ಲಿ ಬೆಳೆ ವೈವಿಧ್ಯೀಕರಣ ಮತ್ತು ಎಣ್ಣೆಕಾಳು, ಬೇಳೆ ಕಾಳು, ಕೃಷಿ ಸಮುದಾಯದಲ್ಲಿ ಸ್ವಾವಲಂಬನೆ ಸಾಧಿಸುವುದು, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.