ಅಹಮದಾಬಾದ್: ಹನ್ನೊಂದು ಮಂದಿ ಮುಸ್ಲಿಮರ ಸಾವಿಗೆ ಕಾರಣವಾದ 2002ರ ನರೋದಾ ಗಾಂವ್ ಹತ್ಯಾಕಾಂಡ ಪ್ರಕರಣದ ತೀರ್ಪನ್ನು ಇಲ್ಲಿಯ ವಿಶೇಷ ನ್ಯಾಯಾಲಯವು ಗುರುವಾರ ಪ್ರಕಟಿಸುವ ಸಾಧ್ಯತೆ ಇದೆ.
ಈ ಪ್ರಕರಣದಲ್ಲಿ ಒಟ್ಟು 86 ಆರೋಪಿಗಳಿದ್ದು, ಗುಜರಾತ್‌ನ ಮಾಜಿ ಸಚಿವೆ ಮಾಯಾ ಕೊಡ್ನಾನಿ, ಬಜರಂಗ ದಳದ ಮುಖಂಡ ಬಾಬು ಬಜರಂಗಿ ಅವರು ಪ್ರಮುಖ ಆರೋಪಿಗಳಾಗಿದ್ದಾರೆ. ಆರೋಪಿಗಳಲ್ಲಿ 18 ಮಂದಿ ಈಗಾಗಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.