ನವದೆಹಲಿ: ರಾಯಪುರದಲ್ಲಿ ನವೆಂಬರ್ 1ರಿಂದ 3ರವರೆಗೆ ರಾಷ್ಟ್ರೀಯ ಬುಡಕಟ್ಟು ನೃತ್ಯೋತ್ಸವ ನಡೆಯಲಿದ್ದು, 1,500 ಮಂದಿ ಸ್ಥಳೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕಲಾವಿದರು ಭಾಗವಹಿಸುವರು ಎಂದುಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.
ಇಲ್ಲಿ ಹಮ್ಮಿಕೊಂಡಿದ್ದ ಪ್ರವಾಸೋದ್ಯಮ ಸಮಾವೇಶದಲ್ಲಿ ಮಾತನಾಡಿದ ಅವರು, ರಾಯಪುರದ ವಿಜ್ಞಾನ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿರುವ ನೃತ್ಯೋತ್ಸವವನ್ನು ಛತ್ತೀಸಗಡದ ಪ್ರವಾಸೋದ್ಯಮ ಮಂಡಳಿ ಆಯೋಜಿಸಿದೆ ಎಂದೂ ತಿಳಿಸಿದ್ದಾರೆ.
‘ಜಗತ್ತಿನಾದ್ಯಂತ ಇರುವ ಬುಡಕಟ್ಟು ಜನರನ್ನು ಒಂದೇ ವೇದಿಕೆಗೆ ಕರೆತರುವ ಮತ್ತು ಅವರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ನೃತ್ಯೋತ್ಸವ ಹಮ್ಮಿಕೊಳ್ಳಲಾಗುತ್ತಿದೆ.ಮಂಗೋಲಿಯಾ, ರಷ್ಯಾ, ಇಂಡೊನೇಷ್ಯಾ, ಸರ್ಬಿಯಾ, ನ್ಯೂಜಿಲೆಂಡ್, ಈಜಿಪ್ಟ್ ಮೊದಲಾದ ದೇಶಗಳ ನೃತ್ಯತಂಡಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ’ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.