ಮುಂಬೈ: ರಾಷ್ಟ್ರೀಯ ಯುವ ದಿನ ಅಂಗವಾಗಿ ಜ.12ರಂದು ಏರ್ಪಡಿಸಿರುವ ಬೃಹತ್ ರ‍್ಯಾಲಿಯಲ್ಲಿ 88,000ಕ್ಕೂ ಹೆಚ್ಚು ಸ್ವಯಂ ಸೇವಕರು ಪಾಲ್ಗೊಂಡು, ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲಿದ್ದಾರೆ.
ಸ್ವಾಮಿ ವಿವೇಕಾನಂದ ಅವರ ಜಯಂತಿ ಅಂಗವಾಗಿ ಜ.12ರಿಂದ 16ರವರೆಗೆ ನಡೆಯುವ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಾಸಿಕ್‌ನಲ್ಲಿ ಉದ್ಘಾಟಿಸಲಿದ್ದಾರೆ.
ರಾಷ್ಟ್ರೀಯ ಭಾವೈಕ್ಯ ಶಿಬಿರ (ಎನ್‌ಐಸಿ) ಕಾರ್ಯಕ್ರಮದಡಿಯಲ್ಲಿ 1995ರಿಂದ ‘ರಾಷ್ಟ್ರೀಯ ಯುವ ದಿನ’ ಆಚರಿಸಲಾಗುತ್ತಿದೆ. ಈ ವರ್ಷ ವಿವಿಧ ಸರ್ಕಾರಗಳ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎನ್‌ಎಸ್‌ಎಸ್ ಘಟಕ, ಎನ್‌ವೈಕೆಎಸ್, ‘ಮೈ ಭಾರತ್’ ಸ್ವಯಂಸೇವಕರು ಸೇರಿದಂತೆ ವಿವಿಧ ಶೈಕ್ಷಣಿಕ ಸಂಸ್ಥೆಗಳು ಇದರಲ್ಲಿ ಭಾಗಿಯಾಗಲಿವೆ.
ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಚ್ಛಿಸುವವರು https://mybharat.gov.in ವೆಬ್‌ಸೈಟ್‌ನಲ್ಲಿ ನೋಂದಣಿಯಾಗಬೇಕು.
ದೇಶದ 750 ಜಿಲ್ಲಾ ಕೇಂದ್ರಗಳಲ್ಲಿ ಮತ್ತು ಪ್ರಮುಖ ನಗರಗಳಲ್ಲಿ ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.