ADVERTISEMENT

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ | ಬಿಜೆಪಿ ತ್ಯಜಿಸಿ NCP ಸೇರಿದ ಮಾಜಿ ಶಾಸಕ

ಪಿಟಿಐ
Published 22 ಅಕ್ಟೋಬರ್ 2024, 13:07 IST
Last Updated 22 ಅಕ್ಟೋಬರ್ 2024, 13:07 IST
ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌
ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌   

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹತ್ತಿರವಾಗಿತ್ತಿರುವ ಬೆನ್ನಲ್ಲೇ ನವಿ ಮುಂಬೈ ಭಾಗದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ಸಂದೀಪ್‌ ನಾಯ್ಕ್‌ ಅವರು ಮಂಗಳವಾರ ಬಿಜೆಪಿ ತೊರೆದು, ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಗೆ ಸೇರ್ಪಡೆಯಾದರು.

ಸಂದೀಪ್‌ ನಾಯ್ಕ್‌ ಅವರ ತಂದೆ ಗಣೇಶ್‌ ನಾಯ್ಕ್‌ ಅವರು ಮಾಜಿ ಸಚಿವರಾಗಿದ್ದು, ಈ ಭಾಗದಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ. 2019ರಲ್ಲಿ ಐರೋಲಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗಣೇಶ್‌ ಗೆಲುವು ಸಾಧಿಸಿದ್ದು, ಮತ್ತೆ ಅದೇ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಸಂದೀಪ್‌ ನಾಯ್ಕ್‌ ಅವರು ಬೆಲಾಪುರ್‌ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಕ್ಷೇತ್ರದ ಹಾಲಿ ಶಾಸಕಿ ಮಂದಾ ವಿಜಯ್‌ ಮಹತ್ರೆ ಅವರನ್ನೇ ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT