ನವದೆಹಲಿ: ಪಂಜಾಬ್‌ನ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಅವರು ಬುಧವಾರ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ವೇಳೆ ಸಿಧು ಅವರು ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷದ ರಾಜ್ಯಘಟಕದಲ್ಲಿ ತಮ್ಮ ಜವಾಬ್ದಾರಿ ಅಥವಾ ಸ್ಥಾನದ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
‘ಪ್ರಿಯಾಂಕಾ ಗಾಂಧಿ ಅವರೊಂದಿಗೆ ಸುದೀರ್ಘ ಸಭೆ ನಡೆಸಿದ್ದೇನೆ’ ಎಂದ ಸಿಧು ಅವರು, ಪ್ರಿಯಾಂಕಾ ಅವರೊಂದಿಗಿರುವ ಫೋಟೊದೊಂದಿಗೆ ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮೊದಲು ಸಿಧು ಅವರು ತಾವು ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವುದಾಗಿ ಮಂಗಳವಾರ ತಿಳಿಸಿದ್ದರು. ಆ ನಂತರ, ಅವರೊಂದಿಗೆ ಯಾವುದೇ ಭೇಟಿ ನಿಗದಿಯಾಗಿಲ್ಲ ಎಂದು ಹೇಳಿದರು.
ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಸಿಧು ಅವರು, ಸಾರ್ವಜನಿಕವಾಗಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.