ಚಂಡೀಗಡ: ಒಂದು ವರ್ಷ ಕಠಿಣ ಸಜೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಪಟಿಯಾಲಾ ಕೇಂದ್ರ ಕಾರಾಗೃಹದಲ್ಲಿ ಗುಮಾಸ್ತ ಕೆಲಸ ಮಾಡುತ್ತಿದ್ದಾರೆ.
34 ವರ್ಷಗಳ ಹಿಂದೆ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷ ಕಠಿಣ ಸಜೆಗೆ ಗುರಿಯಾಗಿರುವ ಸಿಧು ಅವರನ್ನು ಪಟಿಯಾಲಾ ಕೇಂದ್ರ ಕಾರಾಗೃಹದ ಕೊಠಡಿ ಸಂಖ್ಯೆ 10ರಲ್ಲಿ ಇರಿಸಲಾಗಿದೆ. ಅವರು ಇತರೆ ಮೂವರು ಜೊತೆ ಕೊಠಡಿಯಲ್ಲಿ ಇದ್ದಾರೆ.
ಸದ್ಯ ಅವರಿಗೆ ಗುಮಾಸ್ತ ಕೆಲಸ ನೀಡಲಾಗಿದೆ. ಅವರಿಗೆ ದಿನಕ್ಕೆ ₹90 ದಿನಗೂಲಿ ನೀಡಲಾಗುವುದು ಎಂದು ಕಾರಾಗೃಹದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ 9 ಗಂಟೆಯಿಂದ 1 ಗಂಟೆಯವರೆಗೂ ಹಾಗೂ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೂ ಕೆಲಸ ಮಾಡುತ್ತಾರೆ. ಅವರ ಕೊಠಡಿ ಹಾಗೂ ಕೆಲಸ ಮಾಡುವ ಸ್ಥಳದಲ್ಲಿ ಹೆಚ್ಚಿನ ಭದ್ರತೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸದ್ಯ ಅವರುಕೊಠಡಿಯಲ್ಲಿ ಇನ್ನೂ ನಾಲ್ಕು ಕೈದಿಗಳು ಜತೆಯಲ್ಲಿ ಇದ್ದಾರೆ ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.