ಬಿಜಾಪುರ: ಭದ್ರಾತಾ ಪಡೆಗಳು ಹಾಗೂ ನಕ್ಸಲರ ನಡುವೆ ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಡ್ಡೆದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಂದೆಪರಾ ಗ್ರಾಮದ ಸಮೀಫದ ಅರಣ್ಯ ಪ್ರದೇಶದಲ್ಲಿ ಇಂದು ಬೆಳಿಗ್ಗೆ ವಿವಿಧ ಭದ್ರತಾ ಪಡೆಗಳು ಜಂಟಿಯಾಗಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು. ಆ ಸಂದರ್ಭ ಗುಂಡಿನ ಚಕಮಕಿ ನಡೆದಿದೆ ಎಂದು ಬಸ್ತಾರ್ ವಲಯದ ಐಜಿಪಿ ಸುಂದರ್‌ರಾಜ್ ಪಿ. ಹೇಳಿದ್ದಾರೆ.
ಜಿಲ್ಲಾ ಮೀಸಲು ಪಡೆ, ಬಸ್ತಾರ್ ಫೈಟರ್, ಪೊಲೀಸರು, ವಿಶೇಷ ಕಾರ್ಯಪಡೆ ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು.
ಹತ್ಯೆಯಾದವನ ಗುರುತು ಇನ್ನೂ ಪತ್ತೆಯಾಗಿಲ್ಲ. ಎಕೆ–47 ರೈಫಲ್ ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದೂ ಅವರು ಹೇಳದ್ದಾರೆ.
ನವೆಂಬರ್ 7ಕ್ಕೆ ವಿಧಾನಸಭೆ ಚುನಾವಣೆ
90 ಸದಸ್ಯ ಬಲದ ಛತ್ತೀಸಗಢ ವಿಧಾನಸಭೆಗೆ ನವೆಂಬರ್ 7 ಹಾಗೂ 17ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ ಚುನಾವಣೆ ನಡೆಯುವ 20 ಕ್ಷೇತ್ರಗಳಲ್ಲಿ ಬಿಜಾಪುರವೂ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.