ADVERTISEMENT

ಛತ್ತೀಸಗಢದಲ್ಲಿ ಎನ್‌ಕೌಂಟರ್ ‌| ನಕ್ಸಲನ ಹತ್ಯೆ; ಈ ವರ್ಷ ಹತರಾದವರ ಸಂಖ್ಯೆ 113

ಪಿಟಿಐ
Published 24 ಮೇ 2024, 5:10 IST
Last Updated 24 ಮೇ 2024, 5:10 IST
<div class="paragraphs"><p>ಛತ್ತೀಸಗಢದಲ್ಲಿ&nbsp;ಗಸ್ತು ತಿರುಗುತ್ತಿರುವ&nbsp; ಭದ್ರತಾ ಪಡೆ ಸಿಬ್ಬಂದಿ</p></div>

ಛತ್ತೀಸಗಢದಲ್ಲಿ ಗಸ್ತು ತಿರುಗುತ್ತಿರುವ  ಭದ್ರತಾ ಪಡೆ ಸಿಬ್ಬಂದಿ

   

ನಾರಾಯಣಪುರ: ಛತ್ತೀಸಗಢದ ನಾರಾಯಣಪುರ–ಬಿಜಾಪುರ ಜಿಲ್ಲೆಗಳ ಗಡಿ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಶುಕ್ರವಾರ ಬೆಳಿಗ್ಗೆ ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ ಹತನಾಗಿದ್ದಾನೆ.

ವಿಶೇಷ ಕಾರ್ಯ ಪಡೆ (ಎಸ್‌ಟಿಎಫ್‌) ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಹಿಂದಿರುಗುತ್ತಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಪಲ್ಲೆವಾಯ–ಹಂದವಾಡ ಪ್ರದೇಶದಲ್ಲಿ ಗುರುವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಏಳು ನಕ್ಸಲರನ್ನು ಹೊಡೆದುರುಳಿಸಿದ ಕಾರ್ಯಾಚರಣೆಯಲ್ಲಿ ಎಸ್‌ಟಿಎಫ್‌ ಸಿಬ್ಬಂದಿ ಭಾಗಿಯಾಗಿದ್ದರು. ಕಾರ್ಯಾಚರಣೆ ಮುಗಿಸಿ ವಾಪಸ್‌ ಆಗುತ್ತಿದ್ದಾಗ ಸಿಬ್ಬಂದಿಯನ್ನು ಗುರಿಯಾಗಿಸಿ ನಕ್ಸಲರು ಗುಂಡಿನ ದಾಳಿ ನಡೆಸಿದ್ದರು. ಇದು ಗುಂಡಿನ ಕಾಳಗಕ್ಕೆ ಕಾರಣವಾಯಿತು ಎಂದು ವಿವರಿಸಿದ್ದಾರೆ.

ಮೃತ ನಕ್ಸಲನ ಶವವನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದೂ ಹೇಳಿದ್ದಾರೆ.

ಮೇ 21ರಂದು ನಡೆದ ಕಾರ್ಯಾಚರಣೆಯಲ್ಲಿ 8 ನಕ್ಸಲರು ಹತ್ಯೆಯಾಗಿದ್ದರು.

ಇಂದಿನ ಪ್ರಕರಣವೂ ಸೇರಿದಂತೆ, ಭದ್ರತಾ ಪಡೆಗಳು ಈ ವರ್ಷ ನಡೆಸಿದ ಕಾರ್ಯಾಚರಣೆಗಳಲ್ಲಿ ಒಟ್ಟು 113 ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.