ಮುಂಬೈ: ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರು ಮುಂಬೈನ ಆಸ್ಪತ್ರೆಯಲ್ಲಿ ಮಂಗಳವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಮಾಡಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶರದ್ ಪವಾರ್ ಅವರು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಬೇಕಿತ್ತು. ಆದರೆ, ಸದ್ಯ ಶಸ್ತ್ರಚಿಕಿತ್ಸೆ ಸಲುವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪವಾರ್ ಅವರ ಸಂಬಂಧಿಯೂ ಆಗಿರುವ ಎನ್‌ಸಿಪಿಯ ಹಿರಿಯ ನಾಯಕ ಅಜಿತ್ ಪವಾರ್ ಸೋಮವಾರ ಹೇಳಿದ್ದರು.
ದಕ್ಷಿಣ ಮುಂಬೈನಲ್ಲಿರುವ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದೆ. 82 ವರ್ಷದ ಪವಾರ್, ಈ ಹಿಂದೆಯೇ ಒಂದು ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.