ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ–ಅಜಿತ್) ಭಾನುವಾರ ಪಕ್ಷದ ಅಧ್ಯಕ್ಷ ಅಜಿತ್ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ.
ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಸಂಸದ ಸುನೀತ್ ತಟ್ಕರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮತ್ತು ಅವರ ಸಹೋದ್ಯೋಗಿ ಅನಿಲ್ ಪಾಟೀಲ್ ಅವರನ್ನು ಮುಖ್ಯ ಸಚೇತಕರನ್ನಾಗಿ ಮರು ನೇಮಕ ಮಾಡಲಾಗಿದೆ.
ಅನಿಲ್ ಅವರು ಶಾಸಕರ ಹಾಜರಾತಿಯನ್ನು ಮೇಲ್ವಿಚಾರಣೆ ಮಾಡುತ್ತಾರೆ,. ಜತೆಗೆ ಅಧಿವೇಶನಗಳಲ್ಲಿ ವಿವಿಧ ವಿಷಯಗಳ ಕುರಿತು ಮಾತನಾಡಲು ಸಲಹೆ ನೀಡುತ್ತಾರೆ ಎಂದು ಪಕ್ಷ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.