ADVERTISEMENT

ಪ್ರಜ್ವಲ್ ವಿಡಿಯೊ ಪ್ರಕರಣ: ಪೊಲೀಸರಿಂದ ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ

ಪಿಟಿಐ
Published 30 ಏಪ್ರಿಲ್ 2024, 11:32 IST
Last Updated 30 ಏಪ್ರಿಲ್ 2024, 11:32 IST
<div class="paragraphs"><p>ಪ್ರಜ್ವಲ್ ರೇವಣ್ಣ</p></div>

ಪ್ರಜ್ವಲ್ ರೇವಣ್ಣ

   

ನವದೆಹಲಿ: ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯದ ಆರೋಪದ ಕುರಿತು ರಾಷ್ಟ್ರೀಯ ಮಹಿಳಾ ಆಯೋಗವು (ಎನ್‌ಸಿಡಬ್ಲ್ಯು) ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.

ಹಲವು ಮಹಿಳೆಯರ ಮೇಲೆ ಪ್ರಜ್ವಲ್ ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಸರಣಿಯೋಪಾದಿಯಲ್ಲಿ ವಿಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ರೇವಣ್ಣ ಮತ್ತು ಪ್ರಜ್ವಲ್‌ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಕ್ರಿಮಿನಲ್‌ ಪ್ರಕರಣವೂ ದಾಖಲಾಗಿದೆ. ಈ ಎಲ್ಲ ಬೆಳವಣಿಗೆಗಳ ಕುರಿತು ವರದಿ ಸಲ್ಲಿಸುವಂತೆ ಕರ್ನಾಟಕ ಡಿಜಿಪಿಗೆ ಬರೆದ ಪತ್ರದಲ್ಲಿ ಎನ್‌ಸಿಡಬ್ಲ್ಯೂ ಉಲ್ಲೇಖಿಸಿದೆ.

ADVERTISEMENT

ಇಂತಹ ಘಟನೆಗಳು ಮಹಿಳೆಯರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವುದು ಮಾತ್ರವಲ್ಲದೆ, ಮಹಿಳೆಯರ ವಿರುದ್ಧ ಅಗೌರವ ಮತ್ತು ಹಿಂಸೆಯ ಸಂಸ್ಕೃತಿಯನ್ನು ಪ್ರಚೋದಿಸುತ್ತದೆ. ಹಾಗಾಗಿ ದೇಶದಿಂದ ಪರಾರಿಯಾಗಿರುವ ಆರೋಪಿಯನ್ನು ಶೀಘ್ರವೇ ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮಹಿಳಾ ಆಯೋಗವು ಒತ್ತಾಯಿಸಿದೆ.

ಪ್ರಜ್ವಲ್ ವಿರುದ್ಧ ಕೇಳಿಬಂದಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಮಹಿಳಾ ಆಯೋಗವು ಬಲವಾಗಿ ಖಂಡಿಸುತ್ತದೆ. ಪ್ರಕರಣ ಸಂಬಂಧ ಪೊಲೀಸರು ಕೈಗೊಂಡ ಕ್ರಮಗಳ ಕುರಿತು ವಿವರವಾದ ವರದಿಯನ್ನು ಮೂರು ದಿನಗಳಲ್ಲಿ ಸಲ್ಲಿಸಬೇಕು ಎಂದು ಆಯೋಗವು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.