ADVERTISEMENT

ಲ್ಯಾಟರಲ್ ಎಂಟ್ರಿಗೆ ಎನ್‌ಡಿಎ ಸದಸ್ಯರ ವಿರೋಧ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2024, 23:45 IST
Last Updated 19 ಆಗಸ್ಟ್ 2024, 23:45 IST
<div class="paragraphs"><p>ಚಿರಾಗ್ ಪಾಸ್ವಾನ್</p></div>

ಚಿರಾಗ್ ಪಾಸ್ವಾನ್

   

ಪಿಟಿಐ

ನವದೆಹಲಿ: ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ಸರ್ಕಾರದ ಉನ್ನತ ಹುದ್ದೆಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಖಾಸಗಿ ವಲಯದ ತಜ್ಞರು ಹಾಗೂ ಪರಿಣತರನ್ನು ನೇಮಕ ಮಾಡಿಕೊಳ್ಳುವುದನ್ನು ವಿರೋಧಿಸಿದ್ದಾರೆ.

ADVERTISEMENT

ಹೀಗೆ ಮಾಡುವುದು ಪೂರ್ತಿ ತಪ್ಪು ಎಂದು ಅವರು ಹೇಳಿದ್ದಾರೆ. ಈ ವಿಚಾರವನ್ನು ತಾವು ಸರ್ಕಾರದ ಮಟ್ಟದಲ್ಲಿ ಪ್ರಸ್ತಾಪಿಸುವುದಾಗಿಯೂ ಅವರು ಹೇಳಿದ್ದಾರೆ.

ಎನ್‌ಡಿಎ ಭಾಗವಾಗಿರುವ ಹಿಂದುಸ್ತಾನಿ ಅವಾಮ್ ಮೋರ್ಚಾದ ನಾಯಕ ಜಿತನ್ ರಾಮ್ ಮಾಂಝಿ ಅವರು ಕೂಡ ಈ ‍ಪ್ರಸ್ತಾವದ ಬಗ್ಗೆ ಅಸಂತೃಪ್ತಿ ವ್ಯಕ್ತಪಡಿಸಿದ್ದಾರೆ. ವಿಷಯವನ್ನು ಸರ್ಕಾರದ ಜೊತೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

‘ಖಾಸಗಿ ವಲಯದಲ್ಲಿ ಮೀಸಲಾತಿ ಇಲ್ಲ. ಮೀಸಲಾತಿಯನ್ನು ಸರ್ಕಾರಿ ಹುದ್ದೆಗಳಲ್ಲಿಯೂ ನೀಡದೆ ಇದ್ದರೆ... ಈ ಮಾಹಿತಿ ನನಗೆ ಭಾನುವಾರ ದೊರೆಯಿತು. ಇದು ನನ್ನಲ್ಲಿ ಕಳವಳ ಮೂಡಿಸಿದೆ’ ಎಂದು ಪಾಸ್ವಾನ್ ಅವರು ಹೇಳಿದ್ದಾರೆ.

ಲ್ಯಾಟರಲ್ ಎಂಟ್ರಿ ಕ್ರಮವು ಎಸ್‌ಸಿ ಹಾಗೂ ಎಸ್‌ಟಿ ಸಮುದಾಯಗಳ ಮೀಸಲಾತಿಯನ್ನು ಕಸಿದುಕೊಳ್ಳುವ ನಡೆ ಅಲ್ಲ. ಮೀಸಲಾತಿಯನ್ನು ಇಲ್ಲವಾಗಿಸುವ ಯಾವುದೇ ಮಾತು ಇದ್ದರೆ, ಆ ಬಗ್ಗೆ ಬಿಜೆಪಿ ಮುಖಂಡರ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಮಾಂಝಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.