ADVERTISEMENT

ಸುರಂಗ ಪ್ರವೇಶಿಸಿದ NDRF ಸಿಬ್ಬಂದಿ; ಕಾರ್ಮಿಕರಿಗೆ 41 ಹಾಸಿಗೆಗಳ ಆಸ್ಪತ್ರೆ ಸಜ್ಜು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ನವೆಂಬರ್ 2023, 15:52 IST
Last Updated 22 ನವೆಂಬರ್ 2023, 15:52 IST
<div class="paragraphs"><p>ಉತ್ತರಕಾಶಿಯ&nbsp;ಸಿಲ್ಕ್ಯಾರಾದಲ್ಲಿ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಎನ್‌ಡಿಆರ್‌ಎಫ್ ತಂಡ ಬುಧವಾರ ರಾತ್ರಿ ಸುರಂಗ ಪ್ರವೇಶಿಸಿದರು</p></div>

ಉತ್ತರಕಾಶಿಯ ಸಿಲ್ಕ್ಯಾರಾದಲ್ಲಿ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಎನ್‌ಡಿಆರ್‌ಎಫ್ ತಂಡ ಬುಧವಾರ ರಾತ್ರಿ ಸುರಂಗ ಪ್ರವೇಶಿಸಿದರು

   

ರಾಯಿಟರ್ಸ್ ಚಿತ್ರ

ಉತ್ತರಕಾಶಿ: ‘ಇಲ್ಲಿನ ಸಿಲ್ಕ್ಯಾರಾದಲ್ಲಿ ನಿರ್ಮಿಸುತ್ತಿರುವ ಸುರಂಗ ಕುಸಿದ ಪರಿಣಾಮ ಒಳಗೆ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯ ಅಂತಿಮ ಹಂತ ತಲುಪಿದ್ದು, ಕೇಂದ್ರ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್‌) ಸಿಬ್ಬಂದಿ ಸುರಂಗದೊಳಗೆ ಪ್ರವೇಶಿಸಿದ್ದಾರೆ.

ADVERTISEMENT

ಸುರಂಗದ ಮತ್ತೊಂದು ಬದಿಯಿಂದ 41 ಮೀಟರ್ ರಂಧ್ರ ಕೊರೆಯಲಾಗಿದೆ. ಇನ್ನು ಕೆಲವೇ ಮೀಟರ್ ರಂಧ್ರ ಕೊರೆಯುವ ಕಾರ್ಯ ಬಾಕಿ ಇದೆ. ರಾತ್ರಿ ಹೊತ್ತಿಗೆ ಶುಭ ಸುದ್ದಿ ಸಿಗಲಿದೆ ಎಂದು ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ ಭಾಸ್ಕರ್ ಖುಲ್ಬೆ ಹೇಳಿದ್ದರು.

ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವ ಕಾರ್ಯ ಪ್ರಗತಿಯಲ್ಲಿದ್ದು, ವೈದ್ಯರ ತಂಡ ಸ್ಥಳದಲ್ಲಿ ಬೀಡು ಬಿಟ್ಟಿದೆ. ಸಿಲ್ಕ್ಯಾರಾದಲ್ಲಿ 41 ಹಾಸಿಗೆಗಳ ಆಸ್ಪತ್ರೆಯನ್ನೂ ಸಜ್ಜುಗೊಳಿಸಲಾಗಿದೆ.

ಕೇಂದ್ರ ಸರ್ಕಾರದ ಚಾರ್‌ಧಾಮ್ ಸರ್ವಋತು ರಸ್ತೆ ಯೋಜನೆಯಡಿ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾದಲ್ಲಿ ನಿರ್ಮಿಸುತ್ತಿರುವ ಸುರಂಗದ ಕೆಲಭಾಗಗಳು ಕಳೆದ ಶನಿವಾರ (ನ.12) ಕುಸಿದು, 41 ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಹೊರತರಲು ಈಗಾಗಲೇ 45 ಮೀಟರ್‌ ರಂಧ್ರ ಕೊರೆಯಲಾಗಿದೆ. 

ರಕ್ಷಣಾ ಕಾರ್ಯಾಚರಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಯಾಚರಣೆಯಲ್ಲಿ ತೊಡಗಿರುವ ತಂಡ, ಕಾರ್ಮಿಕರತ್ತ ಮೂರನೇ ಎರಡರಷ್ಟು ದೂರದ ಮಾರ್ಗ ಕೊರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.