ADVERTISEMENT

ಆಂಧ್ರದ ಸಿಮೆಂಟ್ ಕಾರ್ಖಾನೆಯಲ್ಲಿ ಬಿಸಿಯಾದ ವಸ್ತು ಬಿದ್ದು 15 ಜನರಿಗೆ ಗಾಯ

ಪಿಟಿಐ
Published 7 ಜುಲೈ 2024, 14:27 IST
Last Updated 7 ಜುಲೈ 2024, 14:27 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಚಿತ್ರ ಕೃಪೆ: iStock

ಅಮರಾವತಿ: ಆಂಧ್ರಪ್ರದೇಶದ ಸಿಮೆಂಟ್ ಕಾರ್ಖಾನೆಯೊಂದರಲ್ಲಿ ಇಂದು (ಭಾನುವಾರ) ಸಂಭವಿಸಿದ್ದ ಅವಘಡದಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ.

ADVERTISEMENT

ರಾಜ್ಯದ ಎನ್‌ಟಿಆರ್‌ ಜಿಲ್ಲೆಯ ಜಗ್ಗಯ್ಯಪೇಟಾ ಮಂಡಲದಲ್ಲಿರುವ ಬುಡವಾಡ ಅಲ್ಟ್ರಾ ಟೆಕ್‌ ಸಿಮೆಂಟ್‌ ಫ್ಯಾಕ್ಟರಿಯಲ್ಲಿ ಇಂದು (ಭಾನುವಾರ) ಬೆಳಿಗ್ಗೆ 11.30 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಗಾಯಗೊಂಡವರಲ್ಲಿ ಸ್ಥಳೀಯ ಕೆಲಸಗಾರರು ಮತ್ತು ವಲಸೆ ಕಾರ್ಮಿಕರು ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ.

‘ಕಾರ್ಖಾನೆಯ ಎರಡನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಮೆಂಟ್‌ ತಯಾರಿಕೆಗೆ ಬಳಸುವ ಅತ್ಯಂತ ಬಿಸಿಯಾದ ವಸ್ತುಗಳು ಮೂರನೇ ಮಹಡಿಯಿಂದ ಕಾರ್ಮಿಕರ ಮೇಲೆ ಬಿದ್ದಿದೆ’ ಎಂದು ನಂದಿಗಾಮ ಸಹಾಯಕ ಪೊಲೀಸ್‌ ಆಯುಕ್ತ ಬಿ. ರವಿ ಕಿರಣ್‌ ಹೇಳಿದ್ದಾರೆ.

ಅವಘಡ ಕುರಿತು ಪ್ರತಿಕ್ರಿಯಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವಘಡದ ಕಾರಣ ಕುರಿತು ವರದಿ ಸಲ್ಲಿಸುವಂತೆ ಮತ್ತು ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಅಲ್ಲದೆ, ಗಾಯಗೊಂಡಿರುವ ಕಾರ್ಮಿಕರಿಗೆ ಕಂಪನಿಯು ಪರಿಹಾರ ನೀಡುವಂತೆ ಖಾತರಿ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ರಾಜ್ಯ ಸರ್ಕಾರದಿಂದ ಕೂಡ ಸಹಾಯ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.