ADVERTISEMENT

ಮುಂದೂಡಲಾಗಿದ್ದ NEET-PG ಪರೀಕ್ಷೆ ಆಗಸ್ಟ್ 11ಕ್ಕೆ

ಪಿಟಿಐ
Published 5 ಜುಲೈ 2024, 11:12 IST
Last Updated 5 ಜುಲೈ 2024, 11:12 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ವೈದ್ಯಕೀಯ ಕ್ಷೇತ್ರದ ಸ್ನಾತಕೋತ್ತರ ಕೋರ್ಸ್‌ ಪ್ರವೇಶಕ್ಕೆ ಇರುವ ನೀಟ್‌–ಪಿಜಿ ಪರೀಕ್ಷೆಯ ಹೊಸ ದಿನಾಂಕ ಶುಕ್ರವಾರ ಪ್ರಕಟಗೊಂಡಿದೆ.

ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿ ತಿಳಿಸಿದೆ.

ADVERTISEMENT

ಮೇ 5ರಂದು ನಡೆದಿದ್ದ ನೀಟ್–ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಹಲವು ಅಕ್ರಮಗಳು ನಡೆದಿವೆ ಎಂಬ ಕೂಗು ಕೇಳಿಬಂದಿತ್ತು. ಈ ವಿವಾದದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 23 ರಂದು ನಡೆಯಬೇಕಿದ್ದ, ನೀಟ್–ಪಿಜಿ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಮುಂದೂಡಿತ್ತು.

ಸದ್ಯ ನೀಟ್‌–ಪಿಜಿ ಪರೀಕ್ಷೆ 2024 ದಿನಾಂಕವನ್ನು ಮರು ನಿಗದಿಪಡಿಸಲಾಗಿದೆ ಎಂದು ಮಂಡಳಿ ಹೇಳಿದೆ.

ಪರೀಕ್ಷೆಯನ್ನು ಸಮರ್ಪಕವಾಗಿ ನಿರ್ವಹಿಸುವ ಉದ್ದೇಶದಿಂದ ಆರೋಗ್ಯ ಸಚಿವಾಲಯವು ಎನ್‌ಬಿಇಎಂಎಸ್‌, ತಾಂತ್ರಿಕ ಪಾಲುದಾರ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌), ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ), ಸೈಬರ್‌ ಸೆಲ್‌ ಅಧಿಕಾರಿಗಳ ಜತೆ ಹಲವು ಸಭೆಗಳನ್ನು ನಡೆಸಿ ಪರಿಶೀಲಿಸಿದೆ ಎಂದು ಮೂಲಗಳು ತಿಳಿಸಿವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.