ADVERTISEMENT

NEET-PG ಪರೀಕ್ಷೆ ಮುಂದೂಡಿಕೆ | ಕೇಂದ್ರದ ವೈಫಲ್ಯ: ಎನ್‌ಸಿಪಿ

ಪಿಟಿಐ
Published 23 ಜೂನ್ 2024, 4:21 IST
Last Updated 23 ಜೂನ್ 2024, 4:21 IST
<div class="paragraphs"><p>ಎನ್‌ಸಿಪಿ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ</p></div>

ಎನ್‌ಸಿಪಿ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ

   

( ಚಿತ್ರ ಕೃಪೆ–X/@Clyde_Crasto)

ಮುಂಬೈ: ನೀಟ್‌–ಪಿಜಿ ಪರೀಕ್ಷೆ ಪ್ರವೇಶ ಪರೀಕ್ಷೆಯನ್ನು ಮುಂದೂಡಿರುವುದು ಕೇಂದ್ರದ ವೈಫಲ್ಯ ಎಂದು ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ ) ಹೇಳಿದೆ.

ADVERTISEMENT

'ಸರ್ಕಾರ ಮಕ್ಕಳ ಜೀವನ ಮತ್ತು ಭವಿಷ್ಯದ ಜೊತೆ ಆಟವಾಡುತ್ತಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿನ ಅವ್ಯವಹಾರಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು' ಎಂದು ಎನ್‌ಸಿಪಿ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ ಆಗ್ರಹಿಸಿದ್ದಾರೆ.

ಯುಜಿ–ನೀಟ್‌ ಮತ್ತು ಯುಜಿಸಿ–ನೆಟ್‌ ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತು ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಇಂದು (ಭಾನುವಾರ) ನಿಗದಿಯಾಗಿದ್ದ ನೀಟ್ –ಯುಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಇದು ಪ್ರಧಾನಿ ಮೋದಿ ಆಡಳಿತದಲ್ಲಿ ಶಿಕ್ಷಣ ವ್ಯವಸ್ಥೆ ಹಾಳಾಗಿದೆ ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.