ADVERTISEMENT

NEET-PG ಮುಂದೂಡಿಕೆ | ಮೋದಿ ಸರ್ಕಾರದಲ್ಲಿ ಶಿಕ್ಷಣ ವ್ಯವಸ್ಥೆ ಹಾಳಾಗಿದೆ: ರಾಹುಲ್‌

ಪಿಟಿಐ
Published 23 ಜೂನ್ 2024, 2:22 IST
Last Updated 23 ಜೂನ್ 2024, 2:22 IST
<div class="paragraphs"><p>ರಾಹುಲ್‌ ಗಾಂಧಿ</p></div>

ರಾಹುಲ್‌ ಗಾಂಧಿ

   

ನವದೆಹಲಿ: ‘ನೀಟ್–ಪಿಜಿ’ ಪರೀಕ್ಷೆಯನ್ನು ಮುಂದೂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ‘ಮೋದಿ ಸರ್ಕಾರ ದೇಶದ ಶಿಕ್ಷಣ ವ್ಯವಸ್ಥೆಯನ್ನು ನಾಶ ಮಾಡಿರುವುದಕ್ಕೆ ಇದು ಮತ್ತೊಂದು ಉದಾಹರಣೆ’ ಎಂದು ಭಾನುವಾರ ಕಿಡಿ ಕಾರಿದ್ದಾರೆ. 

ಸ್ಪರ್ಧಾತ್ಮಕ ಪರೀಕ್ಷೆಗಳ ವಿಶ್ವಾಸಾರ್ಹತೆ ಕುರಿತಾಗಿ ಇತ್ತೀಚೆಗೆ ಕೇಳಿಬಂದಿರುವ ಆರೋಪಗಳ ಕಾರಣಕ್ಕೆ ‘ಮುನ್ನೆಚ್ಚರಿಕೆ ಕ್ರಮ’ವಾಗಿ ಭಾನುವಾರ (ಜೂನ್‌ 23) ನಿಗದಿಯಾಗಿದ್ದ ನೀಟ್–ಪಿಜಿ ‍ಪ್ರವೇಶ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿತ್ತು. 

ADVERTISEMENT

‘ಬಿಜೆಪಿ ಆಡಳಿತದಲ್ಲಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ತಮ್ಮ ವೃತ್ತಿ ಜೀವನವನ್ನು ರೂಪಿಸಿಕೊಳ್ಳುವ ಬದಲಿಗೆ ತಮ್ಮ ಭವಿಷ್ಯವನ್ನು ರಕ್ಷಿಸಿಕೊಳ್ಳಲು ಸರ್ಕಾರದೊಂದಿಗೆ ಹೋರಾಟ ಮಾಡಬೇಕಾಗಿದೆ’ ಎಂದು ಅವರು ವ್ಯಂಗ್ಯವಾಡಿದ್ದಾರೆ.

‘ಪ್ರತಿ ಬಾರಿ ಎಲ್ಲವನ್ನೂ ಮೂಕಪ್ರೇಕ್ಷಕರಾಗಿ ನೋಡುತ್ತಿದ್ದ ನರೇಂದ್ರ ಮೋದಿಯವರು ಪ್ರಶ್ನೆಪತ್ರಿಕೆ ಸೋರಿಕೆ ಜಾಲ ಮತ್ತು ಶಿಕ್ಷಣ ಮಾಫಿಯಾಗಳ ಮುಂದೆ ಅಸಹಾಯಕರಾಗಿದ್ದಾರೆ ಎಂಬುದು ಈಗ ಸ್ಪಷ್ಟವಾಗಿದೆ. ಮೋದಿಯವರ ಅಸಮರ್ಥ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಬಹುದೊಡ್ಡ ಬೆದರಿಕೆಯಾಗಿದ್ದು, ಇದರಿಂದ ಈ ದೇಶದ ಭವಿಷ್ಯವನ್ನು ನಾವು ರಕ್ಷಿಸಬೇಕಾಗಿದೆ’ ಎಂದು ರಾಹುಲ್‌ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.