ADVERTISEMENT

ನೀಟ್-ಯುಜಿ ಅಕ್ರಮ: ಮತ್ತಿಬ್ಬರನ್ನು ಬಂಧಿಸಿದ ಸಿಬಿಐ

ಪಿಟಿಐ
Published 9 ಜುಲೈ 2024, 14:04 IST
Last Updated 9 ಜುಲೈ 2024, 14:04 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌–ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಓರ್ವ ಅಭ್ಯರ್ಥಿ ಸೇರಿದಂತೆ ಇಬ್ಬರನ್ನು ಪಟ್ನಾದಲ್ಲಿ ಸಿಬಿಐ ಬಂಧಿಸಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಳಂದ ಮೂಲದ ನೀಟ್‌–ಯುಜಿ ಅಭ್ಯರ್ಥಿ ಸನ್ನಿ ಮತ್ತು ಮತ್ತೊಬ್ಬ ಅಭ್ಯರ್ಥಿ ಗಯಾದ ರಂಜಿತ್ ಕುಮಾರ್‌ ಅವರ ತಂದೆಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಎಂಟು ಮಂದಿಯನ್ನು ಸಿಬಿಐ ಬಂಧಿಸಿದೆ. ಗುಜರಾತ್‌ನ ಲಾತೂರ್‌ ಮತ್ತು ಗೋಧ್ರಾದಲ್ಲಿ ತಲಾ ಒಬ್ಬರು ಮತ್ತು ಡೆಹ್ರಾಡೂನ್‌ನಲ್ಲಿ ಒಬ್ಬರನ್ನು ತನಿಖಾ ಸಂಸ್ಥೆ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಮೇ 5ರಂದು ನಡೆದಿದ್ದ ನೀಟ್‌–ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಎಫ್‌ಐಆರ್‌ ದಾಖಲಿಸಿದ್ದು, ವಿಶೇಷ ತಂಡಗಳನ್ನು ರಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.