ADVERTISEMENT

ಪ್ರಶ್ನೆ ಪತ್ರಿಕೆ ಸೋರಿಕೆ ‘ಸಾಂಸ್ಥಿಕ ವೈಫಲ್ಯ’: ಧರ್ಮೇಂದ್ರ ಪ್ರಧಾನ್‌

ಪಿಟಿಐ
Published 20 ಜೂನ್ 2024, 23:30 IST
Last Updated 20 ಜೂನ್ 2024, 23:30 IST
<div class="paragraphs"><p>ಧರ್ಮೇಂದ್ರ ಪ್ರಧಾನ್‌</p></div>

ಧರ್ಮೇಂದ್ರ ಪ್ರಧಾನ್‌

   

ನವದೆಹಲಿ: ಯುಜಿಸಿ–ನೆಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ‘ಸಾಂಸ್ಥಿಕ ವೈಫಲ್ಯ’ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಗುರುವಾರ ಹೇಳಿದರು.

‘ಯುಜಿಸಿ–ನೆಟ್‌ ಪರೀಕ್ಷೆ ರದ್ದುಗೊಳಿಸಿರುವುದು ಆಲೋಚನೆ ಮಾಡದೆ ತೆಗೆದುಕೊಂಡ ನಿರ್ಧಾರ ಅಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸ್ಪಷ್ಟ ಪುರಾವೆಗಳು ಲಭ್ಯವಾದ್ದರಿಂದ ಪರೀಕ್ಷೆ ರದ್ದುಗೊಳಿಸಲು ನಿರ್ಧರಿಸಿದ್ದೇವೆ’ ಎಂದರು.

ADVERTISEMENT

ಎನ್‌ಟಿಎಯ ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ಮತ್ತು ಸುಧಾರಣೆಗಳನ್ನು ಶಿಫಾರಸು ಮಾಡಲು ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ರಚಿಸಲಿದೆ ಎಂದು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.