ಕೋಲ್ಕತ್ತ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸಹೋದರನ ಮೊಮ್ಮಗ ಚಂದ್ರ ಬೋಸ್ ಅವರು ಬುಧವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
‘ಬಿಜೆಪಿ ಸೇರಿದಾಗ ನೇತಾಜಿ ಸುಭಾಷ್ ಚಂದ್ರ ಬೋಸ್ ಹಾಗೂ ಶರತ್ ಚಂದ್ರ ಬೋಸ್ ಅವರ ಸಮಗ್ರ ಸಿದ್ದಾಂತವನ್ನು ದೇಶದಾದ್ಯಂತ ಪ್ರಚಾರ ಮಾಡಲು ನನಗೆ ಅನುಮತಿ ನೀಡಲಾಗುವುದೆಂದು ಭರವಸೆ ನೀಡಲಾಗಿತ್ತು. ಆದರೆ, ಈವರೆಗೂ ಅಂಥ ಯಾವುದೇ ಅನುಮತಿ ದೊರೆತಿಲ್ಲ. ಹಾಗಾಗಿ ನಾನು ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ಚಂದ್ರ ಬೋಸ್ ಅವರು ಹೇಳಿದರು.
ಚಂದ್ರ ಬೋಸ್ ಅವರು 2016ರಲ್ಲಿ ಬಿಜೆಪಿ ಸೇರಿದ್ದರು. ಅದೇ ಪಕ್ಷದಿಂದ 2016ರ ವಿಧಾನಸಭಾ ಚುನಾವಣೆ ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.