ನವದೆಹಲಿ: ಜನರ ಅಕೌಂಟ್‌ಗೆ ₹15 ಲಕ್ಷ ಹಾಕುತ್ತೇವೆ ಎಂದು ನಾವು ಹೇಳಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಜನರ ಅಕೌಂಟ್‌ಗೆ ₹ 15 ಲಕ್ಷ ವರ್ಗಾಯಿಸುತ್ತೇವೆ ಎಂದು ನಾವು ಎಲ್ಲೂಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಐಟಿ ದಾಳಿಗೂ ನಮಗೂ ಸಂಬಂಧವಿಲ್ಲ, ಸರ್ಕಾರ ಐಟಿ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಯಾವುದೇ ರೀತಿಯ ಪ್ರಭಾವ ಬೀರಿಲ್ಲ, ವಿರೋಧ ಪಕ್ಷಗಳು ಸುಳ್ಳು ಆರೋಪ ಮಾಡುತ್ತಿವೆ ಎಂದರು. ಕಾಶ್ಮೀರವನ್ನು ಪ್ರತ್ಯೇಕಿಸುವ ಯಾವುದೇ ಉದ್ದೇಶ ಇಲ್ಲ, ಕಾಶ್ಮೀರ ಭಾರತದ ಅವಿಬಾಜ್ಯ ಅಂಗವಾಗಿದೆ. ಕಾಶ್ಮೀರಕ್ಕೆ ಮತ್ತೊಬ್ಬ ಪ್ರಧಾನಿಬೇಕಿಲ್ಲ ಎಂದರು.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ರಾಜ್ಯದ ಸ್ಥಾನಮಾನ ನೀಡಿರುವ ಸಂವಿಧಾನದ 370ನೇ ವಿಧಿ ಹಾಗೂ 35ಎ ವಿಧಿಗಳನ್ನು ವಜಾ ಮಾಡಿದರೆ ಕಣಿವೆ ರಾಜ್ಯದ ಜನರ ಜೀವನ ಮಟ್ಟ ಸುಧಾರಣೆಯಾಗಲಿದೆ ಎಂದು ರಾಜನಾಥ್ ಸಿಂಗ್ ಎಂದರು.
ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬ ಮುಫ್ತಿ ಮತ್ತು ಫಾರೂಕ್ ಅಬ್ದುಲ್ಲಾ ಕಾಶ್ಮೀರದ ವಿಷಯವನ್ನು ರಾಜಕೀಯಕ್ಕೆ ಬಳಕೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.