ವಾರಣಾಸಿ: ಹೆರಿಗೆಗೆ ಮುಂಚಿತವಾಗಿ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ತಾಯಿಗೆ ನೆಗೆಟಿವ್ ವರದಿ ಬಂದಿದ್ದು, ಹೆರಿಗೆಯ ಬಳಿಕ ನವಜಾತ ಶಿಶುವಿಗೆ ಕೋವಿಡ್ ದೃಢಪಟ್ಟಿದೆ ಎಂದು ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ಸರ್ ಸುಂದರ್‌ಲಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಹೆರಿಗೆಗೆ ಮುನ್ನ ತಾಯಿಯನ್ನು ಮೇ 24 ರಂದು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಯಿತು. ಮರುದಿನ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆ ಮಗುವಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ. ಕೌಶನ್ ಕುಮಾರ್ ಗುಪ್ತಾ ತಿಳಿಸಿದ್ದಾರೆ.
ಆರ್‌ಟಿ-ಪಿಸಿಆರ್ ಪರೀಕ್ಷೆಯು ಕೆಲವು ನ್ಯೂನತೆಗಳಿಂದ ಕೂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.