ನವದೆಹಲಿ: ‘ಹೊಸ ಶಿಕ್ಷಣ ನೀತಿಯು ಭಾರತೀಯ ಭಾಷೆಗಳ ಸಂರಕ್ಷಣೆ, ಅಭಿವೃದ್ದಿ, ಸಬಲೀಕರಣಕ್ಕಾಗಿ ಮೋದಿ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಹೇಳಿದರು.
ಅಂತರರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆಯ ಅಂಗವಾಗಿ ಟ್ವೀಟ್ ಮಾಡಿರುವ ಅವರು,‘ ಮಾತೃಭಾಷೆಯು ಅಭಿವ್ಯಕ್ತಿಯ ಪ್ರಬಲ ಮಾಧ್ಯಮವಾಗಿದೆ. ನಮ್ಮ ಹೊಸ ಶಿಕ್ಷಣ ನೀತಿಯು ಭಾರತೀಯ ಭಾಷೆಗಳ ಸಂರಕ್ಷಣೆ, ಅಭಿವೃದ್ದಿ, ಸಬಲೀಕರಣಕ್ಕಾಗಿ ಮೋದಿ ಸರ್ಕಾರದ ಬದ್ಧತೆಯನ್ನು ಹೇಳುತ್ತದೆ’ ಎಂದರು.
‘ಮಾತೃ ಭಾಷೆಗೆ ಇನ್ನಷ್ಟು ಒತ್ತು ನೀಡಬೇಕು. ಪ್ರೋತ್ಸಾಹಿಸಬೇಕು. ದೇಶದ ಅಡಿಪಾಯವನ್ನು ಇನ್ನಷ್ಟು ಸದೃಢಗೊಳಿಸಲು ಮಾತೃಭಾಷೆ ಮತ್ತು ಅದರ ಜ್ಞಾನವನ್ನು ನಮ್ಮ ಮುಂದಿನ ಪೀಳಿಗೆಗೆ ನೀಡಬೇಕು’ ಎಂದು ಅಭಿಪ್ರಾಯಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.