ನವದೆಹಲಿ:ಜಮ್ಮು–ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ಅಕ್ಟೋಬರ್ 31ರಂದು ಅಸ್ತಿತ್ವಕ್ಕೆ ಬಂದಿವೆ. ಇದರೊಂದಿಗೆ ಭಾರತದ ನಕ್ಷೆಯೂ (ಮ್ಯಾಪ್) ಹೊಸದಾಗಿದೆ.ಹೊಸ ನಕ್ಷೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ಉಭಯ ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಾಗುವುದಕ್ಕೂ ಮುನ್ನ ದೇಶದ ಒಟ್ಟು ರಾಜ್ಯಗಳ ಸಂಖ್ಯೆ 29 ಆಗಿತ್ತು. ಇದರಲ್ಲಿ ಜಮ್ಮು–ಕಾಶ್ಮೀರ ಮತ್ತು ಲಡಾಖ್ ಸಹ ಸೇರಿತ್ತು. ಒಟ್ಟು ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆ 7 ಆಗಿತ್ತು. ಇದೀಗ ರಾಜ್ಯಗಳ ಸಂಖ್ಯೆ 28ಕ್ಕೆ ಇಳಿಕೆಯಾಗಿದೆ. ಹಾಗೆಯೇಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆ 9 ತಲುಪಿದೆ.
ಜಮ್ಮು–ಕಾಶ್ಮೀರ ಪುನರ್ ವಿಂಗಡಣೆ ಕಾಯ್ದೆ2019 ಅನ್ನು ಸಂಸತ್ತು ಮೂರು ತಿಂಗಳ ಹಿಂದೆ ಅಂಗೀಕರಿಸಿತ್ತು. ಅದರ ಅನ್ವಯ ಎರಡು ಹೊಸ ಕೇಂದ್ರಾಡಳಿತ ಪ್ರದೇಶಗಳು ಕಾರ್ಯಾರಂಭ ಮಾಡಿವೆ.
ಕೇಂದ್ರಾಡಳಿತ ಪ್ರದೇಶಗಳು
ಪುದುಚೇರಿ, ಲಕ್ಷದ್ವೀಪ, ಲಡಾಖ್, ಜಮ್ಮು–ಕಾಶ್ಮೀರ, ದೆಹಲಿ, ದಮನ್&ದಿಯು, ದಾದ್ರಾ&ನಗರ್‌ಹವೇಲಿ, ಚಂಡೀಗಡ, ಅಂಡಮಾನ್& ನಿಕೋಬಾರ್ ದ್ವೀಪಗಳು
ರಾಜ್ಯಗಳು
ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸಗಡ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯ ಪ್ರದೇಶ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ, ಪಂಜಾಬ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತೆಲಂಗಾಣ, ತ್ರಿಪುರಾ, ಉತ್ತರ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.