ADVERTISEMENT

ಕೈಯಲ್ಲಿ ಸಂವಿಧಾನ, ಕಣ್ಣಿಗಿಲ್ಲ ಕಪ್ಪು ಪಟ್ಟಿ.. ನ್ಯಾಯದೇವತೆಯ ಹೊಸ ರೂಪ ಅನಾವರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಅಕ್ಟೋಬರ್ 2024, 4:34 IST
Last Updated 17 ಅಕ್ಟೋಬರ್ 2024, 4:34 IST
<div class="paragraphs"><p>ನ್ಯಾಯದೇವತೆ</p></div>

ನ್ಯಾಯದೇವತೆ

   

ಚಿತ್ರ: ಆಲ್‌ ಇಂಡಿಯಾ ರೇಡಿಯೊ

ನವದೆಹಲಿ: ಒಂದು ಕೈಯಲ್ಲಿ ತಕ್ಕಡಿ, ಮತ್ತೊಂದು ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದಿರುವ ನ್ಯಾಯದೇವತೆಯ ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯಲಾಗಿದೆ....

ADVERTISEMENT

ಇದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಗ್ರಂಥಾಲಯದಲ್ಲಿ ಸ್ಥಾಪಿಸಲಾಗಿರುವ ನ್ಯಾಯದೇವತೆಯ ಪ್ರತಿಮೆಯ ಹೊಸ ರೂಪ.

ನ್ಯಾಯದೇವತೆಯ ಹೊಸ ಪ್ರತಿಮೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದ್ದು, ಖಡ್ಗ ಹಿಡಿದಿರುವ ಕೈಯಲ್ಲಿ ಸಂವಿಧಾನ ಪ್ರತಿಯಿದೆ. ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯಲಾಗಿದೆ ಎಂದು ಆಲ್‌ ಇಂಡಿಯಾ ‌ರೇಡಿಯೊ ವರದಿ ಮಾಡಿದೆ.

ವಸಾಹತುಶಾಹಿ ಪರಂಪರೆಯನ್ನು ಕೈಬಿಟ್ಟು ಭಾರತ ಮುಂದುವರಿಯಬೇಕಾಗಿದೆ. ನ್ಯಾಯದೇವತೆ ಕುರುಡಲ್ಲ, ಅವಳು ಎಲ್ಲರನ್ನು ಸಮಾನವಾಗಿ ನೋಡುತ್ತಾಳೆ ಎಂಬ ಸಂದೇಶವನ್ನು ರವಾನಿಸಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರು ಈ ಬದಲಾವಣೆಗೆ ಸೂಚಿಸಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ

ಈ ಹಿಂದೆ ಇದ್ದ ನ್ಯಾಯದೇವತೆಯ ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಲಾಗಿತ್ತು. ಸಂಪತ್ತು, ಅಧಿಕಾರ, ಸ್ಥಾನಮಾನವನ್ನು ಪರಿಗಣಿಸದೇ ಎಲ್ಲರಿಗೂ ಸಮಾನ ನ್ಯಾಯವನ್ನು ದೊರಕಬೇಕು ಎಂಬ ಆಶಯವನ್ನು ಇದು ಸೂಚಿಸುತ್ತಿತ್ತು. ಅಲ್ಲದೇ ಒಂದು ಕೈಯಲ್ಲಿ ತಕ್ಕಡಿ ಹಿಡಿದರೆ ಮತ್ತೊಂದು ಕೈಯಲ್ಲಿ ಖಡ್ಗವಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.